ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರು 9 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಹೈಕೋರ್ಟ್ ಆದೇಶದಂತೆ ನಾಮನಿರ್ದೇಶಿತ ಸದಸ್ಯರ ಮತಗಳನ್ನು ಹೊರತುಪಡಿಸಿ ಮತ ಎಣಿಕೆ ನಡೆಸಲಾಗಿದ್ದು, ಈ ಫಲಿತಾಂಶ ಪ್ರಕಟವಾಗಿದೆ.
ಇದನ್ನೂ ಓದಿ:
2021ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ. ಪ್ರಾಣೇಶ್ 6 ಮತಗಳ ಅಂತರದಿಂದ ಗೆದ್ದಿದ್ದರು. ನಾಮನಿರ್ದೇಶಿತ ಸದಸ್ಯರ ಮತದಾನವನ್ನು ಪ್ರಶ್ನಿಸಿ ಗಾಯತ್ರಿ ಶಾಂತೇಗೌಡ ನ್ಯಾಯಾಲಯದ ಮೊರೆ ಹೋಗಿದ್ದರು. ಬಳಿಕ ಹೈಕೋರ್ಟ್ ಮರು ಮತ ಎಣಿಕೆಗೆ ಆದೇಶ ನೀಡಿದ್ದು, ಸುಪ್ರೀಂ ಕೋರ್ಟ್ ಕೂಡ ಅದನ್ನು ಎತ್ತಿಹಿಡಿದಿತ್ತು.
ಮರು ಮತ ಎಣಿಕೆಯಲ್ಲಿ ಗಾಯತ್ರಿ ಶಾಂತೇಗೌಡ ವಿಜಯಿಯಾಗಿದ್ದು, ಅವರಿಗೆ ಪ್ರಮಾಣವಚನ ಬೋಧಿಸುವಂತೆ ನ್ಯಾಯಾಲಯ ಸೂಚಿಸಿದೆ. ಈ ಬೆಳವಣಿಗೆಯಿಂದ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.



