ಹೊಸದಿಗಂತ ಡಿಜಿಟಲ್ ಡೆಸ್ಕ್
ಕಾಲೇಜು ಹಂತದಲ್ಲಿಯೂ ಕನ್ನಡ ಕಲಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
2021 ನೇ ಸಾಲಿನಲ್ಲಿ ಆಗಸ್ಟ್ 7 ಮತ್ತು ಸೆಪ್ಟೆಂಬರ್ 15 ರಂದು ಹೊರಡಿಸಿದ್ದ ಆದೇಶಗಳಿಗೆ ಇದೀಗ ತಡೆಯಾಜ್ಞೆ ಬಿದ್ದಿದೆ .
ರಾಷ್ಟ್ರೀಯ ಶಿಕ್ಷಣ ನೀತಿಯಡಿ (NCERT) ಎಲ್ಲಾ ವಿದ್ಯಾರ್ಥಿಗಳಿಗೂ ಕನ್ನಡ ಕಲಿಕೆ ಕಡ್ಡಾಯಗೊಳಿಸಿತ್ತು. ಆದರೆ ಇದಕ್ಕೆ ತದ್ವಿರುದ್ಧವಾಗಿ, ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪ್ರಾದೇಶಿಕ ಭಾಷೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರವು ಹೈಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿತ್ತು. ಹಾಗಾಗಿ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಒಪ್ಪಿಗೆಯ ಮುದ್ರೆ ನೀಡಿಲ್ಲ.