ಮಾ.27ರಿಂದ ಬೋರ್ಡ್‌ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್

ರಾಜ್ಯ ಸರ್ಕಾರಕ್ಕೆ 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಗ್ರೀನ್ ಸಿಗ್ನಲ್ ನೀಡಿದೆ.
ಸರ್ಕಾರದ ತೀರ್ಮಾನದಂತೆ ವಿದ್ಯಾರ್ಥಿಗಳಿಗೆ ಮಾ.27ರಿಂದ ಬೋರ್ಡ್‌ ಪರೀಕ್ಷೆ ನಡೆಸಲಾಗುತ್ತದೆ.

ಸರ್ಕಾರದಿಂದ ಬೋರ್ಡ್‌ ಪರೀಕ್ಷೆಯನ್ನು ನಡೆಸಲು ರಾಜ್ಯ ಶಿಕ್ಷಣ ಇಲಾಖೆ ತೀರ್ಮಾನ ಕೈಗೊಂಡಿತ್ತು. ಆದರೆ, ಇದನ್ನು ಪ್ರಶ್ನಿಸಿ ಮಕ್ಕಳಿಗೆ ಬೋರ್ಡ್‌ ಪರೀಕ್ಷೆಯಿಂದ ಹೊರೆಯಾಗಲಿದ್ದು, ರದ್ದುಗೊಳಿಸುವಂತೆ ಆಗ್ರಹಿಸಿ ಕೋರ್ಟ್‌ ಮೊರೆ ಹೋಗಿದ್ದರು. ಇದನ್ನು ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಏಕಸದಸ್ಯ ಪೀಠವು ಬೋರ್ಡ್‌ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಈ ಆದೇಶದ ವಿರುದ್ಧ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಕೆ ಮಾಡಿತ್ತು. ಈ ಅರ್ಜಿ ಕುರಿತು ಇಂದು ವಿಚಾರಣೆ ಮಾಡಿದ ಹೈಕೋರ್ಟ್‌ ವಿಭಾಗೀಯ ಪೀಠವು 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆಯನ್ನು ನಡೆಸುವುದಕ್ಕೆ ಅನುಮತಿಯನ್ನು ನೀಡಿದೆ.

10 ದಿನಗಳ ಬಳಿಕ ಮಾ.27 ರಿಂದ ಪರೀಕ್ಷೆ ನಡೆಸಬೇಕು, ಪಠ್ಯ ಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳುವಂತಿಲ್ಲ. ಪರೀಕ್ಷೆಯ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟ ಮಾಡುವಂತಿಲ್ಲ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!