ರಾಕ್ ಲೈನ್ ಮಾಲ್ ಬೀಗಮುದ್ರೆ ತೆರವಿಗೆ ಹೈಕೋರ್ಟ್​ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದ ಜಾಲಹಳ್ಳಿ ಕ್ರಾಸ್ ಬಳಿಯಲ್ಲಿರುವ ರಾಕ್ ಲೈನ್ ಮಾಲ್ ನ ಬೀಗಮುದ್ರೆ ತೆರವಿಗೆ ಹೈಕೋರ್ಟ್​ ಸೂಚನೆ ನೀಡಿದೆ.

ಬಿಬಿಎಂಪಿಯಿಂದ ತೆರಿಗೆ ಪಾವತಿಸದ ಕಾರಣ ಬೀಗ ಮುದ್ರೆ ಜಡಿಯಲಾಗಿತ್ತು. ಇದೀಗ ಬೀಗ ಮುದ್ರೆಯನ್ನು ತೆರವುಗೊಳಿಸುವಂತೆ ಹೈಕೋರ್ಟ್ ಆದೇಶಿಸಿದೆ.

ರಾಕ್ ಲೈನ್ ಮಾಲ್ 2011 ರಿಂದ 2022-23 ರವರೆಗೆ ಸುಮಾರು 11.51 ಕೋಟಿ ರೂ. ಆಸ್ತಿ ತೆರಿಗೆಯನ್ನು ಪಾಲಿಕೆಗೆ ಪಾವತಿಸಬೇಕಿದೆ. ಬಾಕಿ ತೆರಿಗೆ ಪಾವತಿಸಲು ಈಗಾಗಲೇ ಡಿಮಾಂಡ್ ನೋಟೀಸ್ ನೀಡಿದ್ದರು, ತೆರಿಗೆಯನ್ನು ಪಾವತಿಸಿರುವುದಿಲ್ಲ. ಹೀಗಾಗಿ ದಾಸರಹಳ್ಳಿ ವಲಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಾಕ್ ಲೈನ್ ಮಾಲ್ ಅನ್ನು ಸೀಜ್ ಮಾಡಿದ್ದರು.

ಬಿಬಿಎಂಪಿ ಅಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ರಾಕ್ ಲೈನ್ ಮಾಲ್ ಮಾಲೀಕರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಬಿಬಿಎಂಪಿ ಬೀಗ ಮುದ್ರೆಯನ್ನು ತೆರವುಗೊಳಿಸುವಂತೆ ಅರ್ಜಿಯಲ್ಲಿ ಕೋರಿದ್ದರು.ಇದೀಗ ಹೈಕೋರ್ಟ್ ರಾಕ್ ಲೈನ್ ಮಾಲ್ ಬೀಗಮುದ್ರೆಯನ್ನು ತೆರವುಗೊಳಿಸುವಂತೆ ಸೂಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!