ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಬಿಹಾರದಲ್ಲಿ ಕೊರೋನಾ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಲು ಇದೀಗ ರಾಜ್ಯಾದ್ಯಂತ ಮೇ.15ರವರೆಗೆ ಲಾಕ್ ಡೌನ್ ಘೋಷಿಸಿದೆ.
ಪಾಟ್ನಾ ಹೈಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಲಾಕ್ ಡೌನ್ ಆದೇಶ ಹೊರಡಿಸಿದ್ದಾರೆ.
ಅಗತ್ಯ ಸೇವೆಗಳು ಹೊರತು ಪಡಿಸಿ ಎಲ್ಲಾ ಚಟುವಟಿಕೆಗಳು ಮೇ.15ರವರೆಗೆ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.