ಹೊಸದಿಗಂತ ಡಿಜಿಟಲ್ ಡೆಸ್ಕ್;
ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಆಯೋಜಿಸಿರುವ ಕಾವೇರಿ ಆರತಿಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಮಾ.21 ರಂದು ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಮಧ್ಯಂತರ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆದಿದೆ.
ವಾದ ವಿವಾದಗಳನ್ನು ಆಲಿಸಿದ ಕೋರ್ಟ್ ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿಗೆ ತಡೆ ನೀಡಲು ನಿರಾಕರಿಸಿದೆ.