ಹೊಸದಿಗಂತ ಡಿಜಿಟಲ್ ಡೆಸ್ಕ್:
ತನ್ನ ಮತ್ತು ಹೆಂಡತಿಯ ಖಾಸಗಿ ವಿಡಿಯೋವನ್ನು ಫೇಸ್ಬುಕ್ಗೆ ಅಪ್ಲೋಡ್ ಮಾಡಿದ ವ್ಯಕ್ತಿಯ ವಿರುದ್ಧದ ಮೊಕದ್ದಮೆಯನ್ನು ರದ್ದುಗೊಳಿಸಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ.
ಹೆಂಡತಿ ಗಂಡನಲ್ಲಿ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸವನ್ನು ವಿಶೇಷವಾಗಿ ಆತ್ಮೀಯ ಸಂಬಂಧವನ್ನು ಗೌರವಿಸಬೇಕು. ಮದುವೆಯು ಗಂಡನಿಗೆ ತನ್ನ ಹೆಂಡತಿಯ ಮೇಲೆ ಮಾಲೀಕತ್ವ ಅಥವಾ ನಿಯಂತ್ರಣವನ್ನು ನೀಡುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಮಿರ್ಜಾಪುರ ಜಿಲ್ಲೆಯಲ್ಲಿ ಪ್ರದುಮ್ ಯಾದವ್ ಎಂಬವರ ಪತ್ನಿ ಐಟಿ ಕಾಯ್ದೆಯ ಸೆಕ್ಷನ್ 67ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಯಾದವ್ ತಮಗೆ ಅರಿವಿಲ್ಲದೆ ಮತ್ತು ಒಪ್ಪಿಗೆಯಿಲ್ಲದೆ ತಮ್ಮ ನಡುವಿನ ಅತ್ಮೀಯ ಕ್ಷಣಗಳ ದೃಶ್ಯಗಳನ್ನು ತನ್ನ ಮೊಬೈಲ್ನಲ್ಲಿ ಚಿತ್ರೀಕರಿಸಿ ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಿದಲ್ಲದೆ. ನಂತರ ನನ್ನ ಸೋದರಸಂಬಂಧಿ ಮತ್ತು ಇತರ ಸಹ-ಗ್ರಾಮಸ್ಥರೊಂದಿಗೆ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.