ಸಾರಿಗೆ ನೌಕರರಿಗೆ ಶಾಕ್ ಕೊಟ್ಟ ಹೈಕೋರ್ಟ್: 3 ವಾರಗಳ ಕಾಲ ಯಾವುದೇ ಮುಷ್ಕರ ನಡೆಸದಂತೆ ಆದೇಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಾಳೆ ನಡೆಯುವ ಸಾರಿಗೆ ನೌಕರರ ಮುಷ್ಕರಕ್ಕೆ (transport employees) ಹೈಕೋರ್ಟ್ ಬ್ರೇಕ್​​ ಹಾಕಿದ್ದು, 3 ವಾರಗಳ ಕಾಲ ಯಾವುದೇ ಮುಷ್ಕರ ನಡೆಸದಂತೆ ಆದೇಶ ಹೊರಡಿಸಿದೆ.

ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್​ಗೆ ಹೆಚ್.ಎಂ.ವೆಂಕಟೇಶ್ ಎಂಬುವರು ಪಿಐಎಲ್​ ಸಲ್ಲಿಸಿದ್ದರು.

ಮಾ.20ರಂದು ಕಾರ್ಮಿಕ ಇಲಾಖೆ ಆಯುಕ್ತರು ಸಭೆ ಕರೆದಿದ್ದರು. ಆದರೆ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ. ಏಪ್ರಿಲ್ 6ರಂದು ಮುಂದಿನ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ಹೈಕೋರ್ಟ್​​ಗೆ ಸರ್ಕಾರಿ ವಕೀಲೆ ಪ್ರತಿಮಾ ಹೊನ್ನಾಪುರ ಮಾಹಿತಿ ನೀಡಿದ್ದಾರೆ. ನಾಳಿನ ಮುಷ್ಕರದಿಂದ ಸಾರ್ವಜನಿಕ ಸಾರಿಗೆ ಸ್ಥಗಿತವಾಗಲಿದೆ. ಇದರಿಂದ ವಿದ್ಯಾರ್ಥಿಗಳು, ನೌಕರರು, ಪ್ರಯಾಣಿಕರಿಗೆ ತೊಂದರೆ ಉಂಟಾಗಲಿದೆ. ಹೀಗಾಗಿ ಏಪ್ರಿಲ್ 6ರಂದು ಮುಂದಿನ ಸಭೆಯಿರುವ ಹಿನ್ನೆಲೆ‌ 3 ವಾರಗಳ ಕಾಲ ಮುಷ್ಕರಕ್ಕೆ ಮುಂದಾಗದಂತೆ ಸಿಜೆ ಪ್ರಸನ್ನ ಬಿ.ವರಾಳೆ, ಅಶೋಕ್ ಎಸ್.ಕಿಣಗಿ ಅವರಿದ್ದ ಪೀಠ ಸಂಘಟನೆಗಳಿಗೆ ಸೂಚನೆ ನೀಡಿದೆ.

ಸರ್ಕಾರಿ ನೌಕರರ ಸರಿಸಮಾನ‌ ವೇತನಕ್ಕೆ ಆಗ್ರಹಿಸಿ ನಾಳೆಯಿಂದ (ಮಾರ್ಚ್ 24) ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್ ಕರೆನೀಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!