Monday, January 30, 2023

Latest Posts

15,000 ಶಿಕ್ಷಕರ ನೇಮಕಾತಿಗೆ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ರಾಜ್ಯದ ವಿವಿಧ ಶಾಲೆಗಳಲ್ಲಿ ಖಾಲಿ ಇದ್ದ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು,
ಇದೀಗ ಈ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ರಾಜ್ಯ ಶಿಕ್ಷಣ ಇಲಾಖೆ 15 ಸಾವಿರ ಪದವೀಧದ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. 13,363 ಅಭ್ಯರ್ಥಿಗಳು ಮಾತ್ರವೇ ಆಯ್ಕೆಯಾಗಿದ್ದರು. ಇನ್ನೂ 1,637 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಇಲ್ಲದೇ ಖಾಲಿ ಉಳಿದಿದ್ದವು.
ಆದರೆ ತಾತ್ಕಾಲಿಕ ಆಯ್ಕೆ ಪಟ್ಟಿ ಸಂಬಂಧ ಅಕ್ಷತ ಚೌಗಲೆ ಎಂಬುವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ದಿನಾಂಕ 28-11-2022ರಂದು ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಎವರನ್ನು ಒಳಗೊಂಡಂತ ನ್ಯಾಯಪೀಠವು, ಮುಂದಿನ ಆದೇಶದವರೆಗೆ ದಿನಾಂಕ 18-11-2022ರಂದು ಪ್ರಕಟಿಸಿರುವ 1:1 ತಾತ್ಕಾಲಿಕ ಶಿಕ್ಷಕರ ಆಯ್ಕೆ ಪಟ್ಟಿಗೆ ತಡೆಯಾಜ್ಞೆಯನ್ನು ನೀಡಿ ಆದೇಶಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!