ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಶ್ ಗೋಪಾಲಕೃಷ್ಣನ್ ಸೇರಿದಂತೆ ಮತ್ತಿತರರ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಕೇಸ್ಗೆ ಹೈಕೋರ್ಟ್ ತಡೆ ನೀಡಿದೆ.
ಸಣ್ಣ ದುರುಗಪ್ಪ ಎನ್ನುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್, ಕೇಸ್ ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಸೂಚಿಸಿತ್ತು. ಅದರಂತೆ ಸೋಮವಾರ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದ್ರೆ, ಇದೀಗ ಹೈಕೋರ್ಟ್ ಈ ಪ್ರಕರಣಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ.
ಈ ಪ್ರಕರಣಕ್ಕೆ ತಡೆ ಕೋರಿ ಕ್ರಿಶ್ ಗೋಪಾಲಕೃಷ್ಣನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಜಾತಿ ನಿಂದನೆ ಪ್ರಕರಣಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ.