ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ನೀಡಿದ ಹೇಳಿಕೆ ವಿರುದ್ಧ ಕಾರವಾರ ಗ್ರಾಮಾಂತರ ಪೊಲೀಸರು ಅಕ್ಟೋಬರ್ 5 ರಂದು ಎಫ್‌ಐಆರ್ ದಾಖಲಿಸಿದ್ದರು.ಈ ವಿಚಾರವಾಗಿ ಸೂಲಿಬೆಲೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಸೂಲಿಬೆಲೆ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ಧಾರವಾಡ ಪೀಠದ ನ್ಯಾಯಮೂರ್ತಿ ಶಿವಶಂಕರ ಅಮರಣ್ಣನವರ್ ಅವರು, ಎಫ್​ಐಆರ್​ಗೆ ತಡೆ ನೀಡಿ ವಿಚಾರಣೆಯನ್ನು ಮುಂದೂಡಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!