ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಎಫ್‌ಐಆರ್ ಗೆ ಹೈಕೋರ್ಟ್ ತಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:
 
ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿಕೆ ನೀಡಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾದ ಎರಡು ಪ್ರತ್ಯೇಕ ಎಫ್‌ಐಆರ್ ಮತ್ತು ಅದಕ್ಕೆ ಸಂಬಂಧಿಸಿದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.

ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದ್ದು, ಎಫ್‌ಐಆರ್ ದಾಖಲಿಸಿಕೊಂಡಿರುವ ವಿಜಯಪುರ ಗಾಂಧಿ ಚೌಕ ಠಾಣಾ ಪೊಲೀಸರು, ದೂರುದಾರರಾದ ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬು ಮತ್ತು ಚುನಾವಣಾ ಸಂಚಾರಿ ವಿಚಕ್ಷಣಾ ಅಧಿಕಾರಿ ಎಸ್.ಬಿ. ಜಿದ್ದಿಮನಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.

ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಲಾಗಿದೆ ಎಂದು ದೂರಲಾಗಿದೆ. ಆದರೆ, ಪಾಕಿಸ್ತಾನ ಒಂದು ದೇಶ, ಧರ್ಮವಲ್ಲ. ಅರ್ಜಿದಾರರು ಧರ್ಮದ ನಡುವೆ ದ್ವೇಷ ಹುಟ್ಟು ಹಾಕುವ ಯಾವುದೇ ಹೇಳಿಕೆಯನ್ನಾಗಲಿ, ವರ್ತನೆಯನ್ನಾಗಿ ತೋರಲಿಲ್ಲ. ಹೀಗಾಗಿ, ಅವರ ವಿರುದ್ಧದ ಎಫ್‌ಐಆರ್ ರದ್ದುಪಡಿಸಬೇಕಿದೆ. ಅರ್ಜಿ ಇತ್ಯರ್ಥವಾಗುವರೆಗೆ ಎಫ್‌ಐಆರ್ ಹಾಗೂ ತನಿಖೆಗೆ ತಡೆ ನೀಡಬೇಕು ಎಂದು ಕೋರಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!