ಚಿಕ್ಕಬಳ್ಳಾಪುರ ಬಳಿ ಆದಿಯೋಗಿ ಪ್ರತಿಮೆ ಸ್ಥಾಪನೆಗೆ ಹೈಕೋರ್ಟ್‌ ತಡೆಯಾಜ್ಞೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಚಿಕ್ಕಬಳ್ಳಾಪುರ ತಾಲ್ಲೂಕಿನ ಆವಲಗುರ್ಕಿಯ ಹಸಿರುಪಟ್ಟಿ ವ್ಯಾಪ್ತಿಯಲ್ಲಿ ಇಶಾ ಫೌಂಡೇಶನ್‌ ವತಿಯಿಂದ ಸ್ಥಾಪಿಸಲಾಗುತ್ತಿರುವ ಆದಿಯೋಗಿ ಪ್ರತಿಮೆ ಸ್ಥಾಪನೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಆದಿಯೋಗಿ ಪ್ರತಿಮೆ ಸ್ಥಾಪನೆ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಕೋರ್ಟ್‌ ಮಧ್ಯಂತರ ಆದೇಶ ಹೊರಡಿಸಿದೆ.

ಆದಿಯೋಗಿ ಪ್ರತಿಮೆ ಸ್ಥಾಪನೆಯ ಸ್ಥಳವು ಸೂಕ್ಷ್ಮ ವಲಯವಾಗಿದ್ದು, ಅದನ್ನು ವಾಣಿಜ್ಯ ಉದ್ದೇಶಗಳಿಗಾಗಿ ಬಳಕೆ ಮಾಡುವುದು ಸರಿಯಲ್ಲ ಎಂದು ಅರ್ಜಿದಾರರ ಪರ ವಕೀಲ ತಮ್ಮ ವಾದ ಮಂಡಿಸಿದ್ದಾರೆ.

ಪ್ರತಿಮೆ ಸ್ಥಾಪನೆಗೆ ಸರ್ಕಾರ ಕಾನೂನು ಬಾಹಿರವಾಗಿ ಜಮೀನು ಮಂಜೂರು ಮಾಡಿದೆ. ಆದರೆ ಪರಿಸರ ಕಾಳಜಿಯಿಂದಾಗಿ ಈ ಸಂಗತಿಯನ್ನು ಒಪ್ಪಬಹುದು ಎಂದು ಸರ್ಕಾರದ ಅಧಿಸೂಚನೆಯನ್ನು ಪ್ರಶ್ನಿಸುವ ಉದ್ದೇಶದಿಂದ ಯಥಾಸ್ಥಿತಿಗೆ ಆದೇಶ ನೀಡಿದೆ.

ಇದೇ ಜನವರಿ 15ರಂದು ಆದಿಯೋಗಿ ಮೂರ್ತಿ ಉದ್ಘಾಟನೆ ಮಾಡಲು ಯೋಜನೆಯನ್ನು ಹಾಕಿಕೊಳ್ಳಲಾಗಿತ್ತು. ಆದರೆ ಹೈಕೋರ್ಟ್‌ ತಡೆಯಾಜ್ಞೆ ಹಿನ್ನೆಲೆಯಲ್ಲಿ ಉದ್ಘಾಟನೆಗೆ ಉಪರಾಷ್ಟ್ರಪತಿ ಬರುವುದು ಅನುಮಾನವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!