ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಕುದುರೆ ರೇಸ್‌ಗೆ ಹೈಕೋರ್ಟ್‌ ತಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಕುದುರೆ ರೇಸ್ ಆಯೋಜನೆಗೆ ಏಕಸದಸ್ಯ ಪೀಠ ನೀಡಿದ್ದ ಮಧ್ಯಂತರ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್‌ನ ವಿಭಾಗೀಯ ಪೀಠ ಆದೇಶ ನೀಡಿದ್ದು, ಇದರಿಂದ ಸದ್ಯಕ್ಕೆ ರೇಸ್ ಪಂದ್ಯಾವಳಿ ಸ್ಥಗಿತಗೊಳ್ಳಲಿದೆ.

ಸಿಜೆ ಎನ್‌.ವಿ. ಅಂಜಾರಿಯಾ, ನ್ಯಾ.ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ಆದೇಶ ನೀಡಿದೆ. ಇದರಿಂದ ಇಂದಿನಿಂದ ಆರಂಭವಾಗಬೇಕಿದ್ದ ರೇಸ್‌ ಪಂದ್ಯಾವಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಂತಾಗಿದೆ.

ಕುದುರೆ ರೇಸ್ ಆಯೋಜನೆಗೆ ಅನುಮತಿ ನಿರಾಕರಿಸಿ ರಾಜ್ಯ ಸರ್ಕಾರ 2024ರ ಜೂ.6ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್ (ಬಿಟಿಸಿ), ಕರ್ನಾಟಕ ಟ್ರೈನರ್ಸ್‌ ಅಸೋಸಿಯೇಷನ್ಸ್, ಕರ್ನಾಟಕ ರೇಸ್ ಕುದುರೆ ಮಾಲೀಕರ ಸಂಘ, ಕರ್ನಾಟಕ ಜಾಕಿಗಳ ಸಂಘ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್‌ ಏಕಸದಸ್ಯ ಪೀಠ, ಮಾರ್ಚ್‌ ತಿಂಗಳಲ್ಲಿ ಆನ್‌ ಕೋರ್ಸ್‌ ಮತ್ತು ಆಫ್‌ ಕೋರ್ಸ್‌ ಕುದುರೆ ಪಂದ್ಯ ಮತ್ತು ಬೆಟ್ಟಿಂಗ್‌ ಚಟುವಟಿಕೆಗಳನ್ನು ನಡೆಸಲು ಸರ್ಕಾರ ನೀಡಿದ್ದ ಪರವಾನಗಿಯ ಷರತ್ತಿನಂತೆ ಕುದುರೆ ಪಂದ್ಯ ಆಯೋಜಿಸಬಹುದು ಎಂದು ಮಧ್ಯಂತರ ಆದೇಶ ನೀಡಿತ್ತು. ಇದಕ್ಕೆ ಹೈಕೋರ್ಟ್‌ ವಿಭಾಗೀಯ ಪೀಠ ತಡೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!