ಡಿಸಿಎಂ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ತುರ್ತು ನೊಟೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ತುರ್ತು ನೊಟೀಸ್ ನೀಡಿದೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ , ಈ ನೊಟೀಸ್ ಜಾರಿಗೊಳಿಸಿದೆ.

ಡಿಕೆ ಶಿವಕುಮಾರ್ (DK Shivakumar) ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಕನಕಪುರ ನ್ಯಾಯಾಲಯದ ವ್ಯಾಪ್ತಿಯಿಂದ ಬೆಂಗಳೂರಿಗೆ ವರ್ಗಾವಣೆ ಮಾಡಿಕೊಡಿ. ನಾನು ಕನಕಪುರಕ್ಕೆ ಹೋಗಲು ತೊಂದರೆ ಮಾಡುತ್ತಾರೆ. ಹೀಗಾಗಿ ಬೆಂಗಳೂರಿನ ಕೋರ್ಟ್ ಗೆ ವರ್ಗಾವಣೆ ಮಾಡಿ ಎಂದು ಯತ್ನಾಳ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ (Highcourt) ಇಂದು ತುರ್ತು ನೊಟೀಸ್ ಜಾರಿಗೊಳಿಸಲು ಆದೇಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!