ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಲ್ಲಡೆ ಬಾರಿ ಸದ್ದು ಮಾಡಿದ್ದ ಹಿಜಾಬ್ ಪ್ರಕರಣ ತೀರ್ಪು ಇಂದು ಬರಲಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಹಿಜಾಬ್ ವಿವಾದದ ತೀರ್ಪು ಹಿನ್ನೆಲೆ ಬೆಂಗಳೂರು ಒಂದರಲ್ಲೇ 10 ಸಾವಿರಕ್ಕೂ ಹೆಚ್ಚು ಪೊಲೀಸರು ನಿಯೋಜನೆ ಮಾಡಲಾಗಿದ್ದು, ಹೆಚ್ಚುವರಿಯಾಗಿ 8 ಡಿಸಿಪಿ, 40 ಎಸಿಪಿಗಳು, 120 ಇನ್ಸ್ ಪೆಕ್ಟರ್, 40 ಕೆಎಸ್ ಆರ್ ಪಿ, 30 ಸಿಎಆರ್ ತಂಡಗಳನ್ನು ನಿಯೋಜಿಸಲಾಗಿದೆ.
ಮೈಸೂರು: ಜಿಲ್ಲೆ ಶಾಂತಿ ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಇಂದಿನಿಂದ 6 ದಿನ ನಗರದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.
ಕೊಪ್ಪಳ: ಮಾ.20ರವರೆಗೆ ನಗರದಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ವಿಜಯೋತ್ಸವ, ಮೆರವಣಿಗೆ ನಿಷೇಧ ಮಾಡಲಾಗಿದ್ದು, ಕಾಲೇಜ್ ಬಳಿ ಬಿಗಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ.
ಕೋಲಾರ: ಇಂದಿನಿಂದ ಬೆಳಿಗ್ಗೆ 6 ಗಂಟೆಯಿಂದ 21ರ ರಾತ್ರಿ 12 ಗಂಟೆವರೆಗೆ 144 ಸೆಕ್ಷೆನ್ ಜಾರಿ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಇಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ರಾಯಚೂರು: ಇಂದಿನಿಂದ 48 ಗಂಟೆಗಳ ಕಾಲ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ವಿವಿ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲ.
ದಾವಣಗೆರೆ: ಹಿಜಾಬ್ ವಿವಾದಕ್ಕೆ ತೀರ್ಪು ಘೋಷಣೆಯಾಗುವ ಹಿನ್ನೆಲೆ ಮಾ.19ರವರೆಗೆ ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಮಂಗಳೂರು: ಇಂದು ಹಿಜಾಬ್ ವಿವಾದ ತೀರ್ಪು ಹಿನ್ನಲೆ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.