August 17, 2026
Monday, August 17, 2026
spot_img

ದೆಹಲಿಯಲ್ಲಿ ಹೈಡ್ರಾಮಾ: 163ನೇ ಸೆಕ್ಷನ್ ಮೀರಿ CJP ಪ್ರತಿಭಟನೆ, ಅಭಿಜಿತ್ ದೀಪ್ಕೆ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

NEET-2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ ಕೆಲವು ದಿನಗಳಿಂದ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಸಾವಿರಾರು ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷದ ಪ್ರಮುಖ ನಾಯಕರು ಒಗ್ಗೂಡಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರ ರಾಜೀನಾಮೆಗೆ ಬಿಗಿ ಪಟ್ಟು ಹಿಡಿದಿದ್ದಾರೆ.

ನಿಷೇಧಾಜ್ಞೆ ನಡುವೆ ಸಂಸತ್‌ ಚಲೋ: ರಣರಂಗವಾದ ದೆಹಲಿ

ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. ಕಾನೂನು ಸುವ್ಯವಸ್ಥೆ ಕಾಪಾಡಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 163ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಆದಾಗ್ಯೂ, ಯಾವುದೇ ಅಧಿಕೃತ ಅನುಮತಿ ಇಲ್ಲದೆ ಕಾಕ್ರೋಚ್ ಜನತಾ ಪಾರ್ಟಿ (CJP) ಸದಸ್ಯರು ಹಠಾತ್ತನೆ ‘ಸಂಸತ್ ಚಲೋ’ ಮೆರವಣಿಗೆ ಆರಂಭಿಸಿದರು.

ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ ಮತ್ತು ಬಂಧನ

ಪ್ರತಿಭಟನಾಕಾರರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿದು ಸಂಸತ್ತಿನತ್ತ ನುಗ್ಗಲು ಯತ್ನಿಸಿದಾಗ ಪರಿಸ್ಥಿತಿ ಕೈಮೀರಿತು. ಉದ್ರಿಕ್ತರನ್ನು ಚದುರಿಸಲು ಪೊಲೀಸರು ತಕ್ಷಣವೇ ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಸಿಡಿಸಿದರು. ಈ ಘರ್ಷಣೆಯ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ದೆಹಲಿಯ ಕೆಲವು ಆಯಕಟ್ಟಿನ ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಪ್ರತಿಭಟನೆಯ ನೇತೃತ್ವ ವಹಿಸಿದ್ದ CJP ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !