ಹೈ ಲೆವೆಲ್‌ ಕ್ರಿಕೆಟ್‌ ಬೆಟ್ಟಿಂಗ್‌ ದಂಧೆ: ರಾಜಸ್ಥಾನದಲ್ಲಿ 37 ಬುಕ್ಕಿಗಳ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜಸ್ಥಾನದ ಜೈಪುರದ ಸವಾಯಿ ಮಾನ್ಸಿಂಗ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಹೈ ಲೆವೆಲ್‌ ಕ್ರಿಕೆಟ್‌ ಬೆಟ್ಟಿಂಗ್‌ ದಂಧೆ ನಡೆಸುತ್ತಿದ್ದ ಜಾಲವೊಂದನ್ನು ಬೇಧಿಸುವಲ್ಲಿ ಪೋಲೀಸರು ಯಶಸ್ವಿಯಾಗಿದ್ದಾರೆ. ಒಟ್ಟು 37 ಬುಕ್ಕಿಗಳನ್ನು ವಶಕ್ಕೆ ಪಡೆದಿದ್ದು, 70 ಮೊಬೈಲ್ ಫೋನ್‌ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಲಭ್ಯವಿರುವ ಮಾಹಿತಿ ಪ್ರಕಾರ ಕ್ರಿಕೆಟ್ ಪಂದ್ಯಗಳ ನೇರ ಪ್ರಸಾರವನ್ನು ವೀಕ್ಷಿಸಿ ಬೆಟ್ಟಿಂಗ್ ದಂಧೆ ನಡೆಸಲಾಗುತ್ತಿತ್ತು ಎನ್ನಲಾಗಿದೆ. ಪ್ರಸ್ತುತ ನಡೆಯುತ್ತಿರುವ ಸೈಯದ್ ಮುಷ್ತಾಕ್ ಅಲಿ ಟ್ರೋಫಿಗೆ ಸಂಬಂಧಿಸಿದಂತೆ ಬೆಟ್ಟಿಂಗ್‌ಗಳು ನಡೆದಿವೆ. ಬುಕ್ಕಿಗಳು 30 ಸೆಕೆಂಡ್ ಮುಂಗಡವಾಗಿ ಪ್ರಸಾರವಾಗುವ ಟೆಲಿಕಾಸ್ಟ್ ಮಾಡಿದ್ದರು. ಆರೋಪಿಗಳು ಸ್ಟೇಡಿಯಂ ಒಳಗೆ ಕುಳಿತು ಟೆಲಿಕಾಸ್ಟ್ ಆಧಾರದ ಮೇಲೆ ಬೆಟ್ಟಿಂಗ್ ಕಟ್ಟುತ್ತಿದ್ದರು.

ಒಟ್ಟು 37 ಬುಕ್ಕಿಗಳನ್ನು ಬಂಧಿಸಲಾಗಿದ್ದು ಉತ್ತರ ಪ್ರದೇಶ, ದೆಹಲಿ ಮತ್ತು ಹರಿಯಾಣ ಸೇರಿದಂತೆ ಇತರ ರಾಜ್ಯಗಳಲ್ಲಿಯೂ ಇಂತಹ ಬೆಟ್ಟಿಂಗ್ ರಿಂಗ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಬಹಿರಂಗಪಡಿಸಿದ್ದಾರೆ. ಸ್ಥಳದಿಂದ 70 ಕ್ಕೂ ಹೆಚ್ಚು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೋಟಿಗಟ್ಟಲೆ ಬೆಟ್ಟಿಂಗ್ ಕಟ್ಟುತ್ತಿದ್ದರು ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!