Wednesday, August 17, 2022

Latest Posts

ಕೇಂದ್ರ ಸಚಿವ ಸಂಪುಟದಲ್ಲಿ ಯುವ ಸಂಸದರಿಗೆ ಹೆಚ್ಚಿನ ಆದ್ಯತೆ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ನೂತನ ಸಚಿವ ಸಂಪುಟಕ್ಕೆ 43 ಮಂದಿ ಸೇರ್ಪಡೆಯಾಗಲಿದ್ದು, ಈ ಬಾರಿ 50 ವರ್ಷಕ್ಕೂ ಕಡಿಮೆ ವಯಸ್ಸಿನ ಯುವ ಸಚಿವರಿಗೆ ಕ್ಯಾಬಿನೆಟ್ ಮಂತ್ರಿಯಾಗಲು ಅವಕಾಶ ಕೊಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಯುವ ಸಚಿವರ ಜೊತೆಗೆ ಮಹಿಳಾ ಸಂಸದರಿಗೂ ಆದ್ಯತೆ ನೀಡಲಾಗಿದ್ದು, ಈ ಬಾರಿ ಕ್ಯಾಬಿನೆಟ್ ನಲ್ಲಿ 11 ಮಹಿಳಾ ಸಚಿವರು ಇರಲಿದ್ದಾರೆ. 24 ಒಬಿಸಿ, 12 ಎಸ್.ಸಿ, 08 ಎಸ್.ಟಿ, 5 ಅಲ್ಪಸಂಖ್ಯಾತ ಸಚಿವರು, 13 ವಕೀಲರು, 6 ವೈದ್ಯರು, 5 ಇಂಜಿನೀಯರ್ ಗಳು ಹಾಗೂ ನಾಗರೀಕ ಸೇವೆಯಲ್ಲಿರುವ 7 ಸಚಿವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ರಾಜ್ಯದಿಂದ ಪ್ರಧಾನಿ ಮೋದಿ ಕ್ಯಾಬಿನೆಟ್ ಚಿತ್ರದುರ್ಗ ಸಂಸದ ಎ.ನಾರಾಯಣ ಸ್ವಾಮಿ, ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಬೀದರ್ ಸಂಸದ ಭಗವಂತ ಖೂಬಾಗೆ ಕೇಂದ್ರ ಸಚಿವ ಸ್ಥಾನ ದೊರಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!