Sunday, June 4, 2023

Latest Posts

ಪಕ್ಷಾಂತರ ನಾಯಕರಿಗೆ ಆಮಿಷ ಆರೋಪ: ಸಚಿವ ಅಶ್ವತ್ಥನಾರಾಯಣ ಸೇರಿ ನಾಲ್ವರಿಗೆ ಹೈಕೋರ್ಟ್​ನಿಂದ ಬಿಗ್ ರಿಲೀಫ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಕ್ಷಾಂತರ ನಾಯಕರಿಗೆ ಆಮಿಷ ಆರೋಪ ಪ್ರಕರಣದಲ್ಲಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೇರಿದಂತೆ ನಾಲ್ವರು ಬಿಜೆಪಿ ಮುಖಂಡರ ವಿರುದ್ಧ ಜಾರಿಯಾಗಿದ್ದ ಸಮನ್ಸ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಇಂದು ಅರ್ಜಿಯ ವಿಚಾರಣ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ವಿಶೇಷ ಕೋರ್ಟ್ ನಿಂದ ಸಚಿವ ಅಶ್ವತ್ಥನಾರಾಯಣ ಹಾಗೂ ಬಿಜೆಪಿ ಮುಖಂಡರಾದಂತ ಶ್ರೀನಿವಾಸ ಗೌಡ, ಎಸ್ ಆರ್ ವಿಶ್ವನಾಥ್, ಸಿಪಿ ಯೋಗೇಶ್ವರ್ ಅವರಿಗೆ ನೀಡಲಾಗಿದ್ದ ಸಮನ್ಸ್ ಅನ್ನು ರದ್ದುಗೊಳಿಸಿದೆ. ಈ ಮೂಲಕ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಜನಪ್ರತಿನಿಧಿಗಳ ವಿರುದ್ಧ ದೂರು ದಾಖಲಿಸುವ ಮುನ್ನ ದೂರುದಾರರು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯಬೇಕಿತ್ತು. ಆದರೆ ಪಿಸಿಆರ್ ದಾಖಲಿಸುವ ಮುನ್ನ ದೂರುದಾರರು ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆದಿಲ್ಲ. ಹೀಗಾಗಿ ವಿಚಾರಣಾ ನ್ಯಾಯಾಲಯ ಹೊರಡಿಸಿರುವ ಸಮನ್ಸ್ ನಿಯಮಾನುಸಾರ ಇಲ್ಲವೆಂದು ಪೀಠ ಅಭಿಪ್ರಾಯಪಟ್ಟಿದೆ.
ಟಿ.ಜೆ.ಆಬ್ರಾಹಂ ಎಂಬುವರು ಪಕ್ಷಾಂತರ ನಾಯಕರಿಗೆ ಬಿಜೆಪಿ ನಾಯಕರು ಬಿಜೆಪಿ ಬೆಂಬಲಿಸುವಂತೆ ಆಮಿಷ ಒಡ್ಡಿದ್ದಾರೆ ಎಂಬುದಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!