ಕಾರು ಚಲಾಯಿಸಲು ಹೋಗಿ ಹೈಸ್ಕೂಲ್‌ ವಿದ್ಯಾರ್ಥಿಗಳ ಎಡವಟ್ಟು: ಡಿವೈಡರ್‌ಗೆ ಡಿಕ್ಕಿಯಾಗಿ ಇಬ್ಬರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹೈಸ್ಕೂಲ್‌ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಅಪಘಾತವಾಗಿ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಗದಗ ತಾಲೂಕಿನ ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ಘಟನೆ ನಡೆದಿದೆ.

ಹುಲಕೋಟಿ ರಾಜೇಶ್ವರಿ ವಿದ್ಯಾನಿಕೇತನ ಶಾಲೆಯಲ್ಲಿ ವಿದ್ಯಾರ್ಥಿಗಳು 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಲ್ಲಿ ಓರ್ವ ಕಾರು ಚಾಲನೆ ಮಾಡುತ್ತಿದ್ದ ಎನ್ನಲಾಗಿದೆ, ವೇಗವಾಗಿ ಬಂದ ಕಾರು, ಡಿಕ್ಕಿ ಹೊಡೆದಿದೆ. ಮಹಮ್ಮದ್ ಮುಜಾವರ್ (16), ಸಂಜೀವ್ ಗಿರಡ್ಡಿ (16) ಮೃತಪಟ್ಟಿದ್ದಾರೆ. ಆಶಿಸ್ ಗುಂಡುರ್ (16) ಸೇರಿದಂತೆ ಮತ್ತೋರ್ವ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ.

ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿ ತಡರಾತ್ರಿ ಬರುವ ವೇಳೆ ಅಪಘಾತ ಸಂಭವಿಸಿದೆ. ನಾಲ್ಕು ಜನ ವಿದ್ಯಾರ್ಥಿಗಳು ಮಾತ್ರ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಗ್ಯಾದರಿಂಗ್ ಡ್ಯಾನ್ಸ್ ಮುಗಿಸಿಕೊಂಡು ಜೋಶ್‌ನಲ್ಲಿ ವಾಪಸ್‌ ಆಗುತ್ತಿದ್ದರು. ಅತಿಯಾದ ವೇಗವೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ.

ಮೃತರ ದೇಹಗಳು ಹಾಗೂ ಓರ್ವ ಗಾಯಾಳು ಗದಗ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮತ್ತೋರ್ವ ಗಾಯಾಳು ವಿದ್ಯಾರ್ಥಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!