May 16, 2026
Saturday, May 16, 2026
spot_img

ಕೇಜ್ರಿವಾಲ್‌ಗೆ ‘ಹೈ’ ಶಾಕ್: ವಿಚಾರಣೆಯಿಂದ ಹಿಂದೆ ಸರಿಯುವ ಮನವಿ ತಿರಸ್ಕರಿಸಿದ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮದ್ಯ ಅಬಕಾರಿ ನೀತಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರನ್ನು ವಿಚಾರಣೆಯಿಂದ ಹಿಂದೆ ಸರಿಸಬೇಕು ಎಂದು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ನ್ಯಾಯಮೂರ್ತಿ ವಿರುದ್ಧ ಮಾಡಲಾದ ಪಕ್ಷಪಾತದ ಆರೋಪಗಳಿಗೆ ಯಾವುದೇ ದೃಢವಾದ ಪುರಾವೆಗಳಿಲ್ಲ ಎಂದು ನ್ಯಾ. ಸ್ವರ್ಣಕಾಂತ ಶರ್ಮಾ ಹೇಳಿದ್ದಾರೆ. ಕೇವಲ ಅನುಮಾನಗಳ ಆಧಾರದಲ್ಲಿ ನ್ಯಾಯಮೂರ್ತಿಗಳು ಪ್ರಕರಣದಿಂದ ಹಿಂದೆ ಸರಿಯಬೇಕಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ. ತಮ್ಮ ಕರ್ತವ್ಯವು ಸಂವಿಧಾನಕ್ಕೆ ಬದ್ಧವಾಗಿದ್ದು, ನ್ಯಾಯಸಮ್ಮತವಾಗಿ ವಿಚಾರಣೆ ನಡೆಸುವುದಾಗಿ ನ್ಯಾಯಮೂರ್ತಿ ತಿಳಿಸಿದ್ದಾರೆ.

ಇದನ್ನೂ ಓದಿ:

ಆರ್‌ಎಸ್‌ಎಸ್ ಮತ್ತು ಬಿಜೆಪಿಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ವಿಚಾರವನ್ನು ಆಧರಿಸಿ ಪಕ್ಷಪಾತ ಆರೋಪ ಮಾಡುವುದು ಸರಿಯಲ್ಲ ಎಂದು ನ್ಯಾ. ಸ್ವರ್ಣ ಕಾಂತ ಶರ್ಮಾ ಅವರು ಅಭಿಪ್ರಾಯಪಟ್ಟಿದ್ದಾರೆ. ಬಾರ್ ಮತ್ತು ಬೆಂಚ್ ನಡುವೆ ಇರುವ ಸಂಬಂಧ ನ್ಯಾಯಾಲಯದ ಹೊರಗೂ ಮುಂದುವರಿಯುವುದು ಸಾಮಾನ್ಯವಾಗಿದ್ದು, ಅದನ್ನು ರಾಜಕೀಯವಾಗಿ ನೋಡುವುದು ತಪ್ಪು ಎಂದು ಸ್ಪಷ್ಟಪಡಿಸಿದ್ದಾರೆ.

ಈ ತೀರ್ಪಿನಿಂದ ಕೇಜ್ರಿವಾಲ್‌ಗೆ ಹಿನ್ನಡೆಯಾಗಿದ್ದು, ಪ್ರಕರಣದ ವಿಚಾರಣೆ ಮುಂದುವರಿಯಲಿದೆ. ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇದೇ ಪೀಠ ಮುಂದುವರಿಸಲಿದೆ. ಮುಂದಿನ ದಿನಗಳಲ್ಲಿ ಪ್ರಕರಣದ ವಿಚಾರಣೆ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

ಇದಕ್ಕೂ ಮೊದಲು ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದು, ಈಗ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ಈ ವಿಚಾರಣೆ ಪ್ರಕರಣದ ಮುಂದಿನ ದಿಕ್ಕು ನಿರ್ಧರಿಸುವಲ್ಲಿ ಪ್ರಮುಖವಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !