ಹೊಸದಿಗಂತ ಆನ್ ಲೈನ್ ಡೆಸ್ಕ್:
ಇಂದು ರಾಜ್ಯ ಬಜೆಟ್ ಆರಂಭವಾಗಿದ್ದು, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಮೀಸಲಿಡುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ಸ್ಥಾಪಿಸಿ, ರೇಷ್ಮೆ ಬೆಳೆಗಾರರಿಗೂ ಅನುಕೂಲ ಮಾಡಿಕೊಡಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.
ಕೋವಿಡ್ ಸಂಕಷ್ಟ ಹಿನ್ನೆಲೆ ರಾಜ್ಯಗಳಿಗೆ ನೀಡುವ ತೆರಿಗೆ ಪಾಲು ಕಡಿಮೆ ಮಾಡಲಾಗಿದ್ದು, ರಾಜ್ಯದ ಜಿಎಸ್ಟಿ ಸಂಗ್ರಹಣೆ ಇಳಿಕೆ ಆಗಿದೆ ಎಂದಿದ್ದಾರೆ.