ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಾದ್ಯಂತ ಮುಂದಿನ 5 ದಿನಗಳವರೆಗೆ ಗರಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆಗಳಾಗುವುದಿಲ್ಲ, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ 2-4 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಾಮರಾಜನಗರದಲ್ಲಿ 13.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯಾದ್ಯಂತ ಒಣಹವೆ ಇತ್ತು, ಕರಾವಳಿಯ ಮಂಗಳೂರು, ಪಣಂಬೂರು, ಉತ್ತರ ಒಳನಾಡಿನ ಧಾರವಾಡ ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗದಲ್ಲಿ ಮಂಜುಕವಿದ ವಾತಾವರಣವಿದೆ.
ಗರಿಷ್ಠ ತಾಪಮಾನವು ಕರಾವಳಿಯಲ್ಲಿ 33-34 ಡಿಗ್ರಿ ಸೆಲ್ಸಿಯಸ್, ಉತ್ತರ ಒಳನಾಡಿನಲ್ಲಿ 34-37 ಡಿಗ್ರಿ ಸೆಲ್ಸಿಯಸ್, ಆಗುಂಬೆ, ಬೆಂಗಳೂರು, ಚಿಕ್ಕಮಗಳೂರು, ಹಾಸನ, ಮೈಸೂರು, ಚಿಂತಾಮಣಿ, ಮಡಿಕೇರಿಯಲ್ಲಿ 31-33 ಡಿಗ್ರಿ ಸೆಲ್ಸಿಯಸ್, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ ಮತ್ತು ಶಿವಮೊಗ್ಗದಲ್ಲಿ 34-37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ.
ಉತ್ತರ ಒಳನಾಡಿನ ಬಾಗಲಕೋಟೆ ಮತ್ತು ಕೊಪ್ಪಳದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿತ್ತು. ಬೆಳಗಾವಿ, ಬೆಂಗಳೂರು ವಿಮಾನ ನಿಲ್ದಾಣ, ದಾವಣಗೆರೆ, ಚಿಂತಾಮಣಿ, ಹಾಸನ ಮತ್ತು ಮೈಸೂರಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಾಗಿತ್ತು. ಕನಿಷ್ಠ ತಾಪಮಾನವು ಕಾರವಾರದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿತ್ತು. ಹೊನ್ನಾವರ, ಮಂಗಳೂರು, ಪಣಂಬೂರಿನಲ್ಲಿ ಹೆಚ್ಚಿತ್ತು. ಕಲಬುರಗಿ, ಹಾವೇರಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳದಲ್ಲಿ ಸ್ವಲ್ಪ ಚಳಿ ಇತ್ತು ಎನ್ನಲಾಗಿದೆ.