June 14, 2026
Sunday, June 14, 2026
spot_img

ಮಹಿಳಾ ಟಿ20 ವಿಶ್ವಕಪ್ ನಲ್ಲಿ ಹೈವೋಲ್ಟೇಜ್ ಮ್ಯಾಚ್: ಪಾಕಿಸ್ತಾನ ವಿರುದ್ಧ ಟಾಸ್​ ಗೆದ್ದ ಭಾರತ ಬ್ಯಾಟಿಂಗ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಹಿಳಾ ಟಿ20 ವಿಶ್ವಕಪ್ ನಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನ ಮಹಿಳಾ ತಂಡಗಳು ಮುಖಾಮುಖಿಯಾಗಿವೆ. ಇಂಗ್ಲೆಂಡ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕಿ ಹರ್ಮನ್ ಪ್ರೀತ್ ಕೌರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ .

ಟೂರ್ನಿಯಲ್ಲಿ ಮೊದಲ ಮುಖಾಮುಖಿ

ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಮೊದಲ ಪಂದ್ಯವಾಗಿದೆ. ಉಭಯ ತಂಡಗಳು ಟಿ20 ವಿಶ್ವಕಪ್‌ನಲ್ಲಿ 8 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 6 ಪಂದ್ಯಗಳನ್ನು ಗೆದ್ದರೆ, ಪಾಕಿಸ್ತಾನ 2 ಪಂದ್ಯಗಳನ್ನು ಗೆದ್ದಿದೆ.

ಟೀಮ್ ಪ್ರಕಟ

ಪಾಕಿಸ್ತಾನ: ಗುಲ್ ಫಿರೋಜಾ, ಮುನೀಬಾ ಅಲಿ (ವಿಕೀ), ಆಯೇಶಾ ಜಾಫರ್, ಸೈರಾ ಜಬೀನ್, ನತಾಲಿಯಾ ಪರ್ವೈಜ್, ಅಲಿಯಾ ರಿಯಾಜ್, ಫಾತಿಮಾ ಸನಾ (ನಾಯಕ), ರಮೀನ್ ಶಮೀಮ್, ನಶ್ರಾ ಸಂಧು, ಸಾದಿಯಾ ಇಕ್ಬಾಲ್, ತಸ್ಮಿಯಾ ರುಬಾಬ್

ಭಾರತ: ಸ್ಮೃತಿ ಮಂಧಾನ , ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕ), ರಿಚಾ ಘೋಷ್ (ವಿಕೆ), ದೀಪ್ತಿ ಶರ್ಮಾ, ಭಾರತಿ ಫುಲ್ಮಾಲಿ, ಶ್ರೀ ಚರಣಿ, ಕ್ರಾಂತಿ ಗೌಡ್, ಶ್ರೇಯಾಂಕಾ ಪಾಟೀಲ್, ಅರುಂಧತಿ ರೆಡ್ಡಿ

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !