ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು ಬಿಡುಗಡೆಯಾಗುವ ನಿರೀಕ್ಷೆಯಿದೆ.
ಅಭ್ಯರ್ಥಿಗಳ ಆಯ್ಕೆ ಕುರಿತಾಗಿ ದಿಲ್ಲಿಯಲ್ಲಿ ನಡೆದಿರುವ ಸಭೆಯಲ್ಲಿ ಚುನಾವಣಾ ರಣತಂತ್ರದ ಕುರಿತಾಗಿ ಮಹತ್ವದ ಚರ್ಚೆಗಳಾಗಿದ್ದು, ಘೋಷಣೆ ಬಾಕಿ ಉಳಿದಿರುವ 21ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಗೆ ಪದ್ಮರಾಜ್, ಉಡುಪಿ- ಚಿಕ್ಕಮಗಳೂರಿಗೆ ಜಯಪ್ರಕಾಶ್ ಹೆಗ್ಡೆ, ಬೆಂಗಳೂರು ದಕ್ಷಿಣಕ್ಕೆ ಸೌಮ್ಯಾ ರೆಡ್ಡಿ ಆಯ್ಕೆ ಬಹುತೇಕ ಅಂತಿಮಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಪಕ್ಷ ಮುಖಂಡರು ಇದನ್ನು ಖಚಿತಪಡಿಸಿಲ್ಲ.
ರಾಜ್ಯದ 7 ಕ್ಷೇತ್ರಗಳಿಗೆ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಈಗಾಗಲೇ ಟಿಕೆಟ್ ಘೋಷಣೆಯಾಗಿದ್ದು, ಇನ್ನುಳಿದ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗಾಗಿ ಮಂಗಳವಾರ ದಿಲ್ಲಿಯ ಎಐಸಿಸಿ ಕಚೇರಿಯಲ್ಲಿ ಗುಜರಾತ್, ತೆಲಂಗಾಣ, ತಮಿಳುನಾಡು ಸೇರಿದಂತೆ ಕರ್ನಾಟಕದ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆದಿದ್ದು, ಪಟ್ಟಿ ಅಂತಿಮಗೊಳಿಸಲಾಗಿದೆ.