ಹೊನ್ನಾವರದಲ್ಲಿ ಹೆದ್ದಾರಿ ಕುಸಿತ: ಬದಲಿ ಮಾರ್ಗ ಬಳಸಲು ಸೂಚನೆ

ಹೊಸದಿಗಂತ ವರದಿ, ಹೊನ್ನಾವರ:
ತಾಲೂಕಿನ ಸೂಳಿಮಕ್ಕಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ರಸ್ತೆ ಕುಸಿತ ಉಂಟಾಗಿದ್ದು ಹೊನ್ನಾವರ ಸಾಗರ ಮಾರ್ಗದಲ್ಲಿ ಸಂಚರಿಸುವ ಭಾರೀ ವಾಹನಗಳು ಬದಲಿ ಮಾರ್ಗ ಬಳಸುವಂತೆ ಸೂಚಿಸಲಾಗಿದೆ.
ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದ್ದು ಒಂದು ಬದಿಯಲ್ಲಿ ರಸ್ತೆ ಕುಸಿದಿದೆ.
ಹೊನ್ನಾವರ ಮಾವಿನಗುಂಡಿ ಮಾರ್ಗವಾಗಿ ಬೆಂಗಳೂರು, ಸಾಗರ, ಶಿವಮೊಗ್ಗ, ಜೋಗ ಜಲಪಾತ ಮೊದಲಾದ ಸ್ಥಳಗಳಿಗೆ ಪ್ರತಿದಿನ ಖಾಸಗಿ ಬಸ್ಸುಗಳು ಸೇರಿದಂತೆ ನೂರಾರು ವಾಹನಗಳು ಸಂಚರಿಸುತ್ತಿದ್ದು ರಸ್ತೆ ಮತ್ತಷ್ಟು ಕುಸಿಯುವ ಅಪಾಯ ಇರುವ ಕಾರಣ ಬದಲಿ ಮಾರ್ಗ ಬಳಸುವಂತೆ ಸೂಚಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!