April 19, 2026
Sunday, April 19, 2026
spot_img

ಹೆದ್ದಾರಿ ಕಾಮಗಾರಿ ತಂದ ಫಜೀತಿ: ಗ್ಯಾಸ್ ಟ್ಯಾಂಕರ್ ಪಲ್ಟಿ, ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟಪಾಡಿ ಎಂಬಲ್ಲಿ ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸೋಮವಾರ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯೇ ಈ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.

ಹೆದ್ದಾರಿಯಲ್ಲಿ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಚಾಲಕನ ಹತೋಟಿ ತಪ್ಪಿ ರಸ್ತೆ ಮಧ್ಯೆಯೇ ಮಗುಚಿ ಬಿದ್ದಿದೆ. ಜನನಿಬಿಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದರಿಂದ ಸ್ಥಳದಲ್ಲಿ ಕೆಲಕಾಲ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಗ್ಯಾಸ್ ಸೋರಿಕೆಯಾಗುವ ಭೀತಿಯಿಂದ ಸ್ಥಳೀಯರು ಮತ್ತು ವಾಹನ ಸವಾರರು ಭಯಭೀತರಾಗಿದ್ದರು.

ವಿಷಯ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಅಧಿಕಾರಿಗಳು ತಪಾಸಣೆ ನಡೆಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಸುಗಮ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !