ಹಿಜಾಬ್‌ ನಿಷೇಧ ವಾಪಸ್‌: ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ ಬಿಜೆಪಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಹಿಜಾಬ್‌ (Hijab) ನಿಷೇಧ ವಾಪಸ್‌ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿಕೆ ನೀಡಿದ ಬೆನ್ನಲ್ಲೇ ರಾಜ್ಯ ಬಿಜೆಪಿ (Karnataka BJP) ಆಕ್ರೋಶ ಹೊರಹಾಕಿದೆ.

ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಅವರ ಗ್ಯಾರಂಟಿ ಎಂದು ಬಿಜೆಪಿ ಕಿಡಿಕಾರಿದೆ.

ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ತಿಳಿಸಿದ್ದೇನೆ ಎಂದು ಸಿದ್ದರಾಮಯ್ಯನವರ ಎಕ್ಸ್​ ಖಾತೆಗೆ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ, ಶಾಲೆ – ಕಾಲೇಜುಗಳಲ್ಲಿ ಮಕ್ಕಳು ಸಮಾನತೆಯಿಂದ ಕೂಡಿರಬೇಕು ಎಂದೇ ಸಮವಸ್ತ್ರ ನೀತಿಯನ್ನು ಜಾರಿಗೊಳಿಸಲಾಗಿದೆ. ಇದನ್ನು ಸುಪ್ರೀಂ ಕೋರ್ಟ್ ಸಹ ಎತ್ತಿ ಹಿಡಿದಿದೆ. ಆದರೆ, ಶಾಲಾ ವಿದ್ಯಾರ್ಥಿಗಳ ಮನಸ್ಸಲ್ಲಿ ಸಮವಸ್ತ್ರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಭೇದವನ್ನು ಹುಟ್ಟು ಹಾಕುತ್ತಿದ್ದಾರೆ ಆರೋಪಿಸಿದೆ.

ಪಿಎಫ್ಐ ಗೂಂಡಾಗಳು, ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ವೋಟ್ ಬ್ಯಾಂಕ್‌ಗಾಗಿ ಸಿದ್ದರಾಮಯ್ಯ ಅವರು ಸಂವಿಧಾನವನ್ನೇ ತಿದ್ದುಪಡಿ ಮಾಡಲು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!