ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಹಿಜಾಬ್ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಹಿಜಾಬ್ ನಿಷೇಧ ತೆರವಿನ ಬಗ್ಗೆ ಮಾತನಾಡಿದ್ದು ಇಡೀ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಇದೀಗ ಸಿದ್ದರಾಮಯ್ಯ ಮತ್ತೆ ಮಾತನಾಡಿದ್ದು, ರಾಜ್ಯದಲ್ಲಿ ಹಿಜಾಬ್ ನಿಷೇಧ ಆದೇಶ ಇನ್ನೂ ವಾಪಾಸ್ ಪಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಯಾರೋ ಪ್ರಶ್ನೆ ಕೇಳಿದ್ದರು, ಅದಕ್ಕೆ ಉತ್ತರ ಕೊಟ್ಟಿದ್ದೇನೆ ಅಷ್ಟೆ. ಹಿಜಾಬ್ ನಿಷೇಧ ಆದೇಶ ವಾಪಾಸ್ ಬಗ್ಗೆ ಯೋಚನೆ ಮಾಡ್ತಿದ್ದೇವೆ. ಸರ್ಕಾರದಲ್ಲಿ ಈ ಬಗ್ಗೆ ಚರ್ಚೆಯಾಗಲಿದೆ. ನಂತರ ನಿರ್ಧಾರಕ್ಕೆ ಬರುತ್ತೇವೆ ಎಂದಿದ್ದಾರೆ.