September 10, 2026
Thursday, September 10, 2026
spot_img

ಹಿಜಾಬ್ ನಿಷೇಧ ಆದೇಶ ವಾಪಾಸ್: ರಾಜ್ಯ ಸರಕಾರದ ವಿರುದ್ಧ ಆರ್​. ಅಶೋಕ್ ವಾಗ್ದಾಳಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಭಾರೀ ಸುದ್ದಿಯಾಗಿದ್ದ ಹಿಜಾಬ್ ನಿಷೇಧ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಾಪಾಸ್ ಪಡೆದುಕೊಂಡಿದ್ದು, ಈ ಬೆನ್ನಲ್ಲೇ ವಿಪಕ್ಷ ನಾಯಕ ಆರ್​. ಅಶೋಕ್​ ಅವರು ಆಕ್ರೋಶ ಹೊರಹಾಕಿದ್ದಾರೆ.

ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಹಿಜಾಬ್ ಅನ್ನು ನಿಷೇಧಿಸಲಾಗಿತ್ತು. ಇದೀಗ ಮುಸ್ಲಿಮರ ಅತಿಯಾದ ಓಲೈಕೆಗಾಗಿ ಹಿಜಾಬ್ ಜಾರಿಗೊಳಿಸಿದ್ದಾರೆ ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಈಗಾಗಲೇ ಎಲ್ಲಾ ಕಡೆಗಳಲ್ಲಿ ಯಾರು ಯಾರು ಹಿಂದುಗಳ ವಿರುದ್ಧ ನಡೆಯುತ್ತಾರೋ, ಅಂತವರಿಗೆಲ್ಲ ಜನರು ಬುದ್ಧಿ ಕಲಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸೋತು ಮನೆಗೆ ಸೇರಿದ್ದಾರೆ. ತಮಿಳುನಾಡಲ್ಲಿ ಹಿಂದುಗಳನ್ನು ಬೈದು ಸ್ಟಾಲಿನ್ ಗೆ ಸೋಲಾಗಿದೆ. ಕೇರಳ ಪಿಣರಾಯಿಯನ್ನೂ ಸೋಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಹಾಗೂ ಅವರ ಸಚಿವರಿಗೂ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.

ಹಿಂದುಗಳಿಗೆ ಸದಾ ದ್ರೋಹ ಮಾಡುತ್ತಿರುವ ಈ ಸರಕಾರ, ಮೊನ್ನೆ ಅವರಿಗೆ ಅನುದಾನ ನೀಡಿದ್ದರು. ಆದರೆ ಹಿಂದುಗಳಿಗೆ ಒಂದು ರೂಪಾಯಿ ಕೊಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !