ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್‌: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್‌ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ .

ಮೈಸೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಹಿಜಾಬ್‌ ನಿಷೇಧಿಸಿತ್ತು. ಅದನ್ನು ವಾಪಸ್‌ ಪಡೆಯಲಾಗುವುದು. ಹಿಜಾಬ್‌ ನಿಷೇಧ ವಾಪಸ್‌ಗೆ ತಿಳಿಸಿದ್ದೇನೆ ಎಂದು ಸಿಎಂ ತಿಳಿಸಿದರು.

ಉಡುಪು ಅವರವರ ಇಷ್ಟ. ಹಿಜಾಬ್ ನಿಷೇಧ ವಾಪಸ್‌ಗೆ ಹೇಳಿದ್ದೀನಿ. ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ನಾವು ಅಂತಹ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದಾರೆ. .

ಹಿಜಾಬ್ ನಿಷೇಧದ ಆದೇಶ ವಾಪಸ್ ಪಡೆಯುತ್ತೇವೆ. ಹಿಜಾಬ್ ಧರಿಸಿ ಶಾಲಾ-ಕಾಲೇಜುಗಳಿಗೆ, ಪರೀಕ್ಷೆ ಬರೆಯಲು ಹೋಗಬಹುದು ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!