ಹಿಜಾಬ್ ನಿಷೇಧ ವಿವಾದ: ಹೈಕೋರ್ಟ್‌ನಲ್ಲಿ ಪೂರ್ಣಪೀಠದಿಂದ ವಿಚಾರಣೆ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಪೂರ್ಣ ಪೀಠವು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಮುಂದುವರಿಸಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆ.ಎಂ. ಖಾಜಿ ಅವರನ್ನೊಳಗೊಂಡ ಪೂರ್ಣ ಪೀಠವು ಅರ್ಜಿಗಳ ವಿಚಾರಣೆ ನಡೆಸುತ್ತಿದೆ.

ಶುಕ್ರವಾರ ನ್ಯಾಯಪೀಠವು ಶಿಕ್ಷಣ ಸಂಸ್ಥೆಗಳನ್ನು ಶೀಘ್ರವಾಗಿ ಪುನಃ ತೆರೆಯುವಂತೆ ರಾಜ್ಯವನ್ನು ವಿನಂತಿಸಿತು. ಜೊತೆಗೆ ವಿಷಯವು ವಿಚಾರಣೆಗೆ ಬಾಕಿ ಇರುವಾಗ ವಿದ್ಯಾರ್ಥಿಗಳು ತರಗತಿಗಳಲ್ಲಿ ಯಾವುದೇ ರೀತಿಯ ಧಾರ್ಮಿಕ ಬಟ್ಟೆ, ಗುರುತುಗಳನ್ನು ಧರಿಸುವುದನ್ನು ನಿರ್ಬಂಧಿಸಿ, ಮಧ್ಯಂತರ ಆದೇಶ ನೀಡಿದೆ.

ಆದರೂ ರಾಜ್ಯದ ಹಲವೆಡೆ ಹೈಕೋರ್ಟ್ ಆದೇಶವನ್ನೂ ಮೀರಿ ಹಿಜಾಬ್ ಧರಿಸಿ ವಿದ್ಯಾರ್ಥಿಗಳು ಶಾಲೆಗಳಿಗೆ ಬಂದಿರುವ ಘಟನೆಗಳು ವರದಿಯಾಗಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!