ಹಿಜಾಬ್ ಪ್ರಕರಣ: ತುರ್ತು ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಭುಗಿಲೆದ್ದಿದ್ದು, ಈ ಬಗ್ಗೆ ಮಧ್ಯಪ್ರವೇಶಿಸಿ ತುರ್ತು ವಿಚಾರಣೆ ನಡೆಸಬೇಕು ಎನ್ನುವ ಮನವಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ. ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದ್ದು, ದಿನದಿಂದ ದಿನಕ್ಕೆ ಸ್ಥಿತಿ ಹದಗೆಡುತ್ತಿದೆ. ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರು.

ಆದರೆ ಕೋರ್ಟ್ ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ಒಪ್ಪಿಗೆ ನೀಡಿಲ್ಲ. ಇಂದು ಹೈಕೋರ್ಟ್ ವಿಚಾರಣೆ ನಡೆಸಲಿದ್ದು, ಈ ಹಂತದಲ್ಲಿ ಮಧ್ಯಪ್ರವೇಶ ಏಕೆ ಎಂದು ಪ್ರಶ್ನಿಸಿ ಮನವಿಯನ್ನು ನಿರಾಕರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!