ಹಿಜಾಬ್ ವಿವಾದ: ಮೈಸೂರಿನಲ್ಲಿ ಫೆ.28ರವರೆಗೆ ನಿಷೇಧಾಜ್ಞೆ ಮುಂದುವರಿಸಿ ನಗರ ಪೊಲೀಸ್ ಆಯುಕ್ತ ಆದೇಶ

ಹೊಸದಿಗಂತ ವರದಿ, ಮೈಸೂರು:

ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವ ವಿವಾದದ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಫೆ.14 ರಿಂದ 28ರ ರಾತ್ರಿ 10ರ ತನಕ ನಿಷೇಧಾಜ್ಞೆ ಮುಂದುವರಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಹಿಜಾಬ್ ವಿವಾದ ಕುರಿತಂತೆ ಹೈಕೋರ್ಟ್ ಹೊರಡಿಸಿರುವ ಉಲ್ಲೇಖಿತ ಆದೇಶವನ್ನು ಅನುಷ್ಠಾನಗೊಳಿಸಲು ಹಾಗೂ ರಾಜ್ಯ ಸರ್ಕಾರದ ಆದೇಶದನ್ವಯ ಫೆ. 14 ರಿಂದ 1ರಿಂದ 10ನೇ ತರಗತಿ ಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಶಾಲೆಗಳಿಗೆ ಹೋಗುವ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದ0ತೆ ಮತ್ತು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಫೆ. 14 ರಂದು ಬೆಳಿಗ್ಗೆ 6 ಗಂಟೆಯಿ0ದ ಫೆ.28ರ ರಾತ್ರಿ 10 ಗಂಟೆಯವರೆಗೆ ಮೈಸೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿನ ಎಲ್ಲಾ ಶಾಲಾ, ಕಾಲೇಜುಗಳ ಆವರಣದ ಸುತ್ತಲೂ 200 ಮೀ. ವ್ಯಾಪ್ತಿಯವರೆಗೆ ಸಿಆರ್‌ಪಿಸಿ ಸೆಕ್ಷನ್ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಯಾವುದೇ ಸಂಘಟನೆ ಅಥವಾ ಸಾರ್ವಜನಿಕರು ಈ ಆದೇಶವನ್ನು ಉಲ್ಲಂಘಿಸಿ ಪ್ರತಿಭಟನೆ, ಮೆರವಣಿಗೆಯನ್ನು ನಡೆಸಲು ಪ್ರಯತ್ನಿಸಿದಲ್ಲಿ, ಅಲ್ಲಿ ಸೇರಿರುವ ಜನರ ಕೂಟವನ್ನು ಅಕ್ರಮ ಕೂಟವೆಂದು ಪರಿಗಣಿಸಿ, ಆದೇಶ ಉಲ್ಲಂಘನೆ ಕುರಿತಂತೆ ಕಾನೂನಿನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!