ಹಿಜಾಬ್‌ ವಿವಾದ: ಮತ್ತೆ ಅರ್ಜಿ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಿದ ಹೈಕೋರ್ಟ್‌ ತ್ರಿಸದಸ್ಯ ಪೀಠ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಜಾಬ್‌ ವಿವಾದ ವಿಚಾರಣೆಯನ್ನು ಹೈಕೋರ್ಟ್‌ ತ್ರಿಸದಸ್ಯ ಪೀಠ ಮತ್ತೆ ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಿಕೆ ಮಾಡಿದೆ
ಈ ಕುರಿತಂತೆ ಸಲ್ಲಿಕೆಯಾಗಿರುವ 8 ರಿಟ್ ಅರ್ಜಿಗಳು ಹಾಗೂ 20ಕ್ಕೂ ಹೆಚ್ಚು ಮಧ್ಯಂತರ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರಿರುವ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು. ಅಂತಿಮವಾಗಿ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ.
ಇತ್ತ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಆರಿಫ್ ಜಮೀಲ್ ಎಂಬುವರು ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಇನ್ನು ನಾಳೆ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಾದ ಮಂಡನೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!