ಹೊಸದಿಗಂತ ಡಿಜಿಟಲ್ ಡೆಸ್ಕ್
ಹಿಜಾಬ್ ಕುರಿತು ವಿಚಾರಣೆ ಹೈಕೋರ್ಟ್ ತ್ರಿಸದಸ್ಯ ಪೂರ್ಣ ಪೀಠದ ಮುಂದೆ ವಿಚಾರಣೆ ನಡೆಸಿದ್ದು, ಮತ್ತೆ ನಾಳೆ ಮಧ್ಯಾಹ್ನ 2.30ಕ್ಕೆ ಅರ್ಜಿಯ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.
ಈಗಾಗಲೇ ಅರ್ಜಿದಾರರ ಪರ ವಾದ ಮಂಡನೆಯ ಬಳಿಕ ಇಂದು ಮತ್ತೆ ಪುನಾರಂರಭಗೊಂಡ ಅರ್ಜಿಯ ವಿಚಾರಣೆ ವೇಳೆ, ನ್ಯಾಯಪೀಠದ ಮುಂದೆ ಸರ್ಕಾರದ ಪರ ಅಡ್ವಕೇಜ್ ಜನರಲ್ ವಾದ ಮಂಡನೆ ಮಾಡಿದರು. ಸರ್ಕಾರದ ವಾದ ಆಲಿಸಿದಂತ ನ್ಯಾಯಪೀಠವು, ನಾಳೆಗೆ ವಿಚಾರಣೆ ಮುಂದೂಡಿದೆ.