Friday, July 1, 2022

Latest Posts

ಹಿಜಾಬ್ ವಿವಾದ: ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಹಿಜಾಬ್ ವಿವಾದದ ಕುರಿತಂತೆ ಕರ್ನಾಟಕ ಹೈಕೋರ್ಟ್ ಇಂದು ನೀಡಿದ್ದ ತೀರ್ಪು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸ್ಲಲಿಸಲಾಗಿದೆ.
ಈ ಸಂಬಂದ ವಿದ್ಯಾರ್ಥಿನಿ ನಿಭಾ ನಜಾ ಪರ ವಕೀಲರಾದ ಆನಾಸ್ ತನ್ವೀರ್ ಎಂಬುವರು ಮೇಲ್ಮನವಿಯನ್ನು ಸಲ್ಲಿಸಿದ್ದಾರೆ.
ಈ ಮೂಲಕ ಇದೀಗ ಸುಪ್ರೀಂ ಕೋರ್ಟ್ ಅಂಗಳಕ್ಕೆ ಹಿಜಾಬ್ ವಿವಾದ ಬಂದಿದೆ.
ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಲಾಗಿದೆ. ಹಿಜಾಬ್ ಧರಿಸುವುದು ಅಭಿವ್ಯಕ್ತಿ ಸ್ವಾತಂತ್ರ್ಯ. ಹೀಗಾಗಿ ಸಂವಿಧಾನದ 19(1)(ಎ)ಪರಿಚ್ಚೇದದ ಅಡಿಯಲ್ಲಿ ಈ ಹಕ್ಕನ್ನು ಸಂರಕ್ಷಿಸಲಾಗಿದೆ. ಆದರೆ ಕರ್ನಾಟಕ ಹೈಕೋರ್ಟ್ ಈ ಅಂಶವನ್ನು ಗಣನೆಗೆ ತೆಗೆದುಕೊಳ್ಳದೇ ತೀರ್ಪು ನೀಡಿದೆ ಎಂದು ಮನವಿಯಲ್ಲಿ ಉಲ್ಲೇಖಿಸಿಲಾಗಿದೆ.
ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯಲ್ಲಿ ಅಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ನಾವು ಪರಿಗಣಿಸಿದ್ದೇವೆ ಎಂದು ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ನೇತೃತ್ವದ ನ್ಯಾಯಪೀಠ ಇಂದು ಹೇಳಿತ್ತು. ರಾಜ್ಯವು ಶಾಲಾ ಸಮವಸ್ತ್ರ ಆರ್ಟಿಕಲ್ 25 ರ ಅಡಿಯಲ್ಲಿ ವಿದ್ಯಾರ್ಥಿಗಳ ಹಕ್ಕುಗಳಿಗೆ ಸಮಂಜಸವಾದ ನಿರ್ಬಂಧವಾಗಿದೆ. ಆದ್ದರಿಂದ ಫೆಬ್ರವರಿ 5 ರಂದು ಕರ್ನಾಟಕ ಸರ್ಕಾರ ಹೊರಡಿಸಿದ ಸರ್ಕಾರಿ ಆದೇಶವು ಅವರ ಹಕ್ಕುಗಳನ್ನು ಉಲ್ಲಂಘಿಸುವುದಿಲ್ಲ ಎಂದು ನ್ಯಾಯಾಲಯವು ಹೇಳಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss