ಹಿಜಾಬ್‌ ಪ್ರಕರಣ: ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಶೀಘ್ರ ಸುಪ್ರೀಂಗೆ ಮೇಲ್ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ರಾಜ್ಯಾದ್ಯಂತ ತೀವ್ರ ಚರ್ಚೆಗೆ ಚರ್ಚೆಗೆ ಕಾರಣವಾಗಿದ್ದ ಹಿಜಾಬ್ ವಿವಾದದ ಕುರಿತು ಹೈಕೋರ್ಟ್‌ ತೀರ್ಪು ಹೊರಬಿದ್ದಿದೆ. ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್​ರಿದ್ದ ಪೂರ್ಣ ಪೀಠವು ತನ್ನ ತೀರ್ಪು ಪ್ರಕಟಿಸಿದ್ದು, ಸರ್ಕಾರ ಹೊರಡಿಸಿದ್ದ ಸಮವಸ್ತ್ರದ ಆದೇಶವನ್ನು ಎತ್ತಿಹಿಡಿದಿದೆ.
ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ, ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ, ಹಿಜಾಬ್‌ ಸೇರಿದಂತೆ ಯಾವುದೇ ಧಾರ್ಮಿಕ ವಸ್ತ್ರಗಳನ್ನು ಶಾಲಾಕಾಲೇಜುಗಳಲ್ಲಿ ಧರಿಸಬಾರದು ಎಂಬುದನ್ನು ಸ್ಪಷ್ಟಪಡಿಸಿದೆ. ಈ ನಡುವೆ ಹೈಕೋರ್ಟ್‌ ತೀರ್ಪಿನ ಕುರಿತು ಹಿಜಾಬ್‌ ಪರ ಅರ್ಜಿದಾರರ ವಕೀಲ ಶತಭಿಷ ಶಿವಣ್ಣ ಪ್ರತಿಕ್ರಿಯೆ ನೀಡಿದ್ದು, ಹೈಕೋರ್ಟ್ ತೀರ್ಪು ಪ್ರಶ್ನಿಸಿ ಶೀಘ್ರದಲ್ಲೇ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ. ಹೈಕೋರ್ಟ್ ತೀರ್ಪಿನ ಪ್ರತಿ ಲಭ್ಯವಾದ ಬಳಿಕ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಅರ್ಜಿದಾರರ ಪರ ವಕೀಲ ಹೇಳಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!