ಹಿಜಾಬ್ ವಿವಾದ: ಸರಕಾರದ ನಿಲುವನ್ನು ಸಮರ್ಥಿಸಿದ ರಹೀಂ ಉಚ್ಚಿಲ್ ಗೆ ಕೊಲೆ ಬೆದರಿಕೆ

ಹೊಸದಿಗಂತ ವರದಿ, ಮಂಗಳೂರು:

ರಾಜ್ಯದ ಕಾಲೇಜುಗಳಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ಕುರಿತ ಚರ್ಚೆ ವೇಳೆ ಸರಕಾರದ ನಿಲುವಿಗೆ ಸಮರ್ಥನೆ ವ್ಯಕ್ತಪಡಿಸಿರುವ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ.
ಈ ಬಗ್ಗೆ ರಹೀಂ ಉಚ್ಚಿಲ್ ಅವರು ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿ
ನಡೆಯುತ್ತಿರುವ ಮಾಧ್ಯಮ ಚರ್ಚೆ ವೇಳೆ ರಹೀಂ ಉಚ್ಚಿಲ್ ಅವರು ಸರಕಾರದ ನಿಲುವು ಬೆಂಬಲಿಸಿ ಮಾತನಾಡಿದ್ದರು. ಈ ಕಾರಣಕ್ಕೆ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಫೆ. ೪ರಂದು ಮಧಾಹ್ನ ೨.೫೬ ಸಮಯ ಕರೆ ಬಂದಿದೆ. ಕರೆ ಮಾಡಿದ ವ್ಯಕ್ತಿ, ರಹೀಂ ಉಚ್ಚಿಲ್ ಹಾಗೂ ಕುಟುಂಬವನ್ನು ನಿಂದಿಸಿ ಜೀವಬೆದರಿಕೆ ಹಾಕಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಹೀಂ ಉಚ್ಚಿಲ್, ಬೆದರಿಕೆ ಬಗ್ಗೆ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ, ಇಂತಹ ಗೊಡ್ಡು ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here