ಕೇರಳಕ್ಕೂ ಕಾಲಿಟ್ಟ ಹಿಜಾಬ್​ ವಿವಾದ:ಶಾಲೆಯ ವಿರುದ್ಧ ಪ್ರತಿಭಟನೆ, ಲಾಠಿ ಚಾರ್ಜ್​

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹಿಜಾಬ್​ ವಿವಾದ ಈಗ ಕೇರಳಕ್ಕೂ ಕಾಲಿಟ್ಟಿದೆ. ಇಲ್ಲಿನ ಶಾಲೆಯೊಂದರಲ್ಲಿ ಹಿಜಾಬ್​ ಧರಿಸಲು ಅನುಮತಿ ನೀಡದ್ದಕ್ಕೆ ವಿದ್ಯಾರ್ಥಿ ಸಂಘಟನೆಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಲಾಠಿ ಚಾರ್ಜ್​ ಮಾಡಿದ್ದಾರೆ.

ಕೇರಳದ ಕ್ಯಾಲಿಕಟ್‌ನ ಪ್ರಾವಿಡೆನ್ಸ್ ಗರ್ಲ್ಸ್ ಶಾಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್​ ಧರಿಸದಂತೆ ಸೂಚಿಸಿ, ಶಾಲಾ ಸಮವಸ್ತ್ರ ನಿಯಮ ಪಾಲಿಸಲು ಹೇಳಲಾಗಿದೆ.

ಇದರ ವಿರುದ್ಧ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ (ಎಸ್‌ಐಒ) ಮತ್ತು ಮುಸ್ಲಿಂ ಸ್ಟೂಡೆಂಟ್ಸ್ ಫೆಡರೇಶನ್ (ಎಂಎಸ್‌ಎಫ್) ವತಿಯಿಂದ ಶಾಲೆಯ ವಿರುದ್ಧ ಪ್ರತಿಭಟನಾ ರ‍್ಯಾಲಿ ನಡೆಸಿ, ಶಾಲೆಗೆ ಮುತ್ತಿಗೆ ಹಾಕುವ ಯತ್ನ ನಡೆದಿದೆ.

ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ಚಕಮಕಿ ನಡೆದಿದೆ. ಪೊಲೀಸರನ್ನು ಭೇದಿಸಿಕೊಂಡು ಪ್ರತಿಭಟನಾಕಾರರು ಮುನ್ನುಗ್ಗುತ್ತಿದ್ದಾಗ ಇದನ್ನು ತಡೆಯಲು ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್​ ಮಾಡಿದ್ದಾರೆ. ಹಲವರನ್ನು ವಶಕ್ಕೆ ಪಡೆಯಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!