Saturday, February 4, 2023

Latest Posts

ಇರಾನ್‌ನಲ್ಲಿ ಮತ್ತೆ ಹಿಜಾಬ್ ಕೂಗು: ಕಾರ್‌ನಲ್ಲಿದ್ರೂ ಧರಿಸಬೇಕು ಎಂದು ಕಟ್ಟೆಚ್ಚರ ನೀಡಿದ ಪೊಲೀಸರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇರಾನ್‌ನಲ್ಲಿ ಭುಗಿಲೆದ್ದ ಹಿಜಾಬ್‌ ವಿರುದ್ಧ ಪ್ರತಿಭಟನೆ ಮುಂದುವರಿದ್ದು, ಇದರ ನಡುವೆಯೇ, ಕಾರುಗಳಲ್ಲಿಯೂ ಕಡ್ಡಾಯವಾಗಿ ಹಿಜಾಬ್‌ ಧರಿಸಬೇಕು ಎಂದು ಇರಾನ್ ಪೊಲೀಸರು ಮಹಿಳೆಯರಿಗೆ ಕಟ್ಟೆಚ್ಚರ ನೀಡಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ 16 ರಂದು, 22 ವಯಸ್ಸಿನ ಮಹ್ಸಾ ಅಮಿನಿ ಹಿಜಾಬ್‌ ಧರಿಸದೇ ಇದ್ದಿದ್ದಕ್ಕೆ ಟೆಹ್ರಾನ್‌ನಲ್ಲಿ ಬಂಧನಕ್ಕೊಳಗಾಗಿ ನೈತಿಕ ಪೊಲೀಸ್‌ಗಿರಿಗೆ ಬಲಿಯಾಗಿದ್ದರು. ಇದಾದ ಬಳಿಕಇರಾನ್‌ನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಯಿತು. ಮಹಿಳೆಯರು ಹಿಜಾಬ್‌ ಸುಟ್ಟು, ತಲೆಗೂದಲು ಕತ್ತರಿಸಿ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದರು.

ಇದೀಗ ಮಹಿಳೆಯರು ಕಾರ್‌ಗಳಲ್ಲಿ ಹಿಜಾಬ್ ತೆಗೆಯುತ್ತಾರೆ ಎಂದು 2020ರಲ್ಲೇ ʼನಜೀರ್-‌1ʼ ಎಂಬ ಕಾರ್ಯಕ್ರಮವನ್ನು ಪರಿಚಯಿಸಲಾಗಿತ್ತು. ಈ ಬಗ್ಗೆ ಎಚ್ಚರಿಕೆ ನೀಡುವಂತೆ ಮತ್ತೆ ಕಾರ್ಯಕ್ರಮವನ್ನು ದೇಶಾದ್ಯಂತ ಪರಿಚಯಿಸಲು ಪೊಲೀಸರು ಮುಂದಾಗಿದ್ದಾರೆ. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮದ ಎಚ್ಚರಿಕೆಯನ್ನೂ ನೀಡಿದ್ದಾರೆ.

ನಿಮ್ಮ ವಾಹನದಲ್ಲಿ ಹಿಜಾಬ್ ತೆಗೆಯುವುದನ್ನು ಗಮನಿಸಲಾಗಿದೆ. ಸಮಾಜದ ನಿಯಮಗಳನ್ನು ಗೌರವಿಸುವುದು ಮತ್ತು ಈ ಕ್ರಮ ಪುನರಾವರ್ತನೆಯಾಗದಂತೆ ನೋಡಿಕೊಳ್ಳುವುದು ಅವಶ್ಯಕ ಎಂದು ಪೊಲೀಸರು ಸಂದೇಶ ರವಾನಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!