Thursday, June 30, 2022

Latest Posts

ಹಿಜಾಬ್ ಹೋರಾಟಗಾರ್ತಿಯರ ಹೈಡ್ರಾಮಾ: ಶಿಸ್ತು ಕ್ರಮದ ಎಚ್ಚರಿಕೆ ನೀಡಿದ ಶಾಸಕ ರಘುಪತಿ ಭಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಉಡುಪಿ ಜಿಲ್ಲೆಯಲ್ಲಿ ಇಂದು ಹಿಜಾಬ್ ಹೋರಾಟಗಾರ್ತಿಯರ ಹೈಡ್ರಾಮಾ ನಡೆದಿದ್ದು, ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೇ ಮನೆಗೆ ಮರಳಿದ್ದಾರೆ.
ಈ ಸಂಬಂಧಿಸಿದಂತೆ ಮಾತನಾಡಿದ ಶಾಸಕ ರಘುಪತಿ ಭಟ್ ವಿದ್ಯಾರ್ಥಿನಿಯರ ಮೇಲೆ ಶಿಸ್ತು ಕ್ರಮ ಜರುಗಿಸಲು ಸೂಚಿಸಿದ್ದಾರೆ.
ಇದೊಂದು ಷಡ್ಯಂತ್ರ ಎನ್ನುವುದು ಸಾಬೀತಾಗಿದೆ. ನಿನ್ನೆ ಸಂಜೆಯವರಿಗೆ ಫೋನ್ ಮಾಡಿ ಹಾಲ್ ಟಿಕೆಟ್ ಪಡೆಯಲು ಹೇಳಿದ್ದೆವು. ಆದರೂ ಇಂದು ಬೆಳಗ್ಗೆ ಬಂದು ಹಾಲ್ ​ಟಿಕೆಟ್​ ಪಡೆದುಕೊಂಡು, ನಂತರ ಹೈಡ್ರಾಮಾ ಮಾಡಿದ್ದಾರೆ ಎಂದರು.
ನಾಳೆ ಮತ್ತೆ ನಾಟಕ ಮಾಡಿದರೆ ನ್ಯಾಯಾಂಗ ನಿಂದನೆ ಕೇಸು ದಾಖಲಿಸಲು ಹೇಳಿದ್ದೇನೆ. ಇವರೇನು ಹುಡುಗಾಟಿಕೆ ಮಾಡುತ್ತಿದ್ದಾರಾ? ತರಗತಿಗಳಿಗೆ ಹಾಜರಾಗಿಲ್ಲ. ಇವರೇನು ಪರೀಕ್ಷೆ ಬರೆಯುತ್ತಾರೆ?. ಹಿಜಾಬ್ ಧರಿಸಲು ಬಿಟ್ಟರೂ ಪರೀಕ್ಷೆ ಬರೆಯುವುದಿಲ್ಲ. ನಮ್ಮ ಕಾಲೇಜಿನ ವಾತಾವರಣ ಕೆಡಿಸುವುದೇ ಇವರ ಉದ್ದೇಶ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss