‘ಹಿಜಾಬ್ ನಮ್ಮ ಘನತೆ’ ಗೋಡೆ ಬರಹ: ಇಬ್ಬರು ಯುವಕರ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸರ್ಕಾರಿ ಶಾಲೆಯ ಗೋಡೆಯ ಮೇಲೆ ‘ಹಿಜಾಬ್ ನಮ್ಮ ಘನತೆ’ ಎಂದು ಬರಹ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ (Karnataka High Court ) ರದ್ದುಗೊಳಿಸಿ ಆದೇಶ ಹೊರಡಿಸಿದೆ.

ವಿಜಯನಗರ ಜಿಲ್ಲೆ ಹೊಸಪೇಟೆ ಸರ್ಕಾರಿ ಶಾಲೆಯ ಗೋಡೆಯ ಮೇಲೆ ಹಿಜಾಬ್ ನಮ್ಮ ಘನತೆ ಎಂದು ಬರಹ ಬರೆಯಲಾಗಿತ್ತು. ಮುಜಾಮಿಲ್ ಮತ್ತು ಮೊಹಮ್ಮದ್ ಜಮಾಲ್ ವಿರುದ್ಧ ಕೇಸು ದಾಖಲಾಗಿತ್ತು.

ಈ ಪ್ರಕರಣ ರದ್ದುಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ ನಾಗಪ್ರಸನ್ನರಿದ್ದ ಹೈಕೋರ್ಟ್ ಪೀಠ, ಅರ್ಜಿದಾರರ ವಾದ ಪುರಸ್ಕರಿಸಿ ಕೇಸ್ ರದ್ದುಪಡಿಸಿ ಆದೇಶಿಸಿದೆ.

ಶಾಲಾ ಗೋಡೆ ಮೇಲೆ ಬರೆದಿದ್ದರಿಂದ ಮುಖ್ಯೋಪಾಧ್ಯಾಯರು ನೀಡಿದ ದೂರಿನ ಪ್ರಕಾರ, ಮಾರ್ಚ್ 16, 2022 ರಂದು ಇಬ್ಬರ ವಿರುದ್ಧ ತೆರೆದ ಪ್ರದೇಶಗಳ ವಿರೂಪ ತಡೆ ಕಾಯ್ದೆಯಡಿ ಕೇಸ್ ದಾಖಲಿಸಲಾಗಿತ್ತು. ಆದ್ರೆ, ಈ ಕಾಯ್ದೆ ಹೊಸಪೇಟೆ ಪಟ್ಟಣಕ್ಕೆ ಅನ್ವಯವಾಗುವುದಿಲ್ಲ. ಕಾಯ್ದೆ ಹೊಸಪೇಟೆಗೆ ಅನ್ವಯಿಸಲು ಸರ್ಕಾರ ಅಧಿಸೂಚನೆ ಹೊರಡಿಸಿಲ್ಲ ಎಂದು ಆರೋಪಿಗಳ ಪರ ವಕೀಲರು ಕೋರ್ಟ್​ ಮುಂದೆ ವಾದ ಮಂಡಿಸಿದ್ದಾರೆ. ಇದನ್ನು ಆಲಿಸಿದ ಕೋರ್ಟ್, ಅರ್ಜಿದಾರರ ವಾದ ಪುರಸ್ಕರಿಸಿ ಕೇಸ್ ರದ್ದುಗೊಳಿಸಿ ಆದೇಶ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!