ಹಿಜಾಬ್ ಧರಿಸಿ ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾಗುವಂತಿಲ್ಲ: ಬಿ ಸಿ ನಾಗೇಶ್ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮಾರ್ಚ್ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್ ಧರಿಸಿ ಹಾಜರಾಗುವಂತಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದರು.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಾಗೇಶ್, ಮಾರ್ಚ್​ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್​ಗೆ ನಿರ್ಬಂಧಿಸಲಾಗಿದ್ದು, ಹಿಜಾಬ್ ಧರಿಸಿ ಬರುವವರಿಗೆ ಪರೀಕ್ಷೆ ಬರೆಯಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪದವಿಪೂರ್ವ ಕಾಲೇಜುಗಳ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ.

ʼಹಿಜಾಬ್‌ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿದೆ. ಹೀಗಾಗಿ ಪರೀಕ್ಷೆಯ ಸಮಯದಲ್ಲಿ
ಹಿಜಾಬ್ ಅನುಮತಿಸುವ ಪ್ರಶ್ನೆಯೇ ಇಲ್ಲ’ ಎಂದು ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!