ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ : ಅರ್ಜಿ ಪರಿಶೀಲಿಸುವುದಾಗಿ ಸುಪ್ರೀಂ ಸಮ್ಮತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ಕರ್ನಾಟಕದ ಪದವಿ ಪೂರ್ವ ಕಾಲೇಜುಗಳಲ್ಲಿ ತಮ್ಮ ತಲೆಗೆ ಸ್ಕಾರ್ಫ್ ಹಾಕಿಕೊಂಡು ವಾರ್ಷಿಕ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡುವಂತೆ ವಿದ್ಯಾರ್ಥಿಗಳ ಗುಂಪು ಸುಪ್ರೀಂ ಗೆ ಪಿಐಎಲ್ ಸಲ್ಲಿಸಿದೆ. ‌ ಅರ್ಜಿ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಬುಧವಾರ ಸಮ್ಮತಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ಪೀಠವು ಮನವಿಯನ್ನು ಪರಿಶೀಲಿಸಲಾಗುವುದು ಎಂದು ಹೇಳಿದರು.

ಬೋರ್ಡ್ ಪರೀಕ್ಷೆಗಳು ಮಾರ್ಚ್ 9 ರಂದು ಪ್ರಾರಂಭವಾಗಲಿವೆ.‌ ತ್ರಿಸದಸ್ಯ ಪೀಠವು ಶೀಘ್ರದಲ್ಲೇ ವಿಚಾರಣೆ ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ನ್ಯಾಯಾಲಯವು ಅರ್ಜಿದಾರರಿಗೆ ಭರವಸೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!