Monday, July 4, 2022

Latest Posts

ಹಿಜಾಬ್ ತೀರ್ಪಿನ ನ್ಯಾಯಮೂರ್ತಿಗಳಿಗೆ ಬೆದರಿಕೆ ಪ್ರಕರಣ: FIR ರದ್ದತಿಗೆ ಸುಪ್ರೀಂ ಕದತಟ್ಟಿದ ಆರೋಪಿ!

ಹೊಸದಿಗಂತ ಡಿಜಟಲ್‌ ಡೆಸ್ಕ್

ಹಿಜಾಬ್ ಕುರಿತ ಪ್ರಕರಣ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ್ದ ಆರೋಪಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ತನ್ನ ವಿರುದ್ಧದ ಪ್ರಕರಣ ಕೈಬಿಡುವಂತೆ ಮನವಿ ಮಾಡಿದ್ದಾನೆ.
ಹಿಜಾಬ್ ವಿವಾದಕ್ಕೆ ಅಂತ್ಯಹಾಡಲು ಮಾರ್ಚ್ 15 ರಂದು ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಹಾಗೂ ಜೆಎಂ ಖಾಜಿ ಅವರನ್ನೊಳಗೊಂಡ ಪೀಠ ಮಹತ್ವದ ತೀರ್ಪು ನೀಡಿತ್ತು.
ಶಾಲಾ ಆಡಳಿತ ಮಂಡಳಿ ನಿರ್ಧರಿಸುವ ಸಮವಸ್ತ್ರ ಧರಿಸಬೇಕು. ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಆದೇಶವನ್ನು ಎತ್ತಿಹಿಡಿದು ತೀರ್ಪು ನೀಡಿತ್ತು. ಈ ತೀರ್ಪಿನ ವಿರುದ್ಧ ತಮಿಳುನಾಡಿನ ಮುಸ್ಲಿಮ್ ಸಂಘಟನೆ ನಾಯಕ ರೆಹಮತುಲ್ಲಾ ವೇದಿಕೆಯಲ್ಲಿ ಬಹಿರಂಗವಾಗಿ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ್ದ. ರೆಹಮತುಲ್ಲಾ ವಿರುದ್ಧ ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಪ್ರತ್ಯೇಕ ಎಐಆರ್ ದಾಖಲಾಗಿತ್ತು. ಇದರಲ್ಲಿ ಎರಡೂ ಒಂದೇ ಪ್ರಕರಣ ಆಗಿರುವುದರಿಂದ ಕರ್ನಾಟಕದಲ್ಲಿನ ಎಐಆರ್ ರದ್ದು ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ರಹೆಮತುಲ್ಲಾ ಅರ್ಜಿ ಸಲ್ಲಿಸಿದ್ದಾನೆ.
ಬೆದರಿಕೆ ಆರೋಪದಡಿ ತಮಿಳುನಾಡಿನ ಮಧುರೈನಲ್ಲಿ ಹಾಗೂ ಕರ್ನಾಟಕದ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ. ಎರಡು ಪ್ರಕರಣಗಳಲ್ಲಿರುವ ಅಂಶ ಒಂದೇ ಆಗಿದೆ. ಹೀಗಾಗಿ ಎರಡನೇ ಪ್ರಕರಣ ಅಂದರೆ ಕರ್ನಾಟಕದ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಮಾಡುವಂತೆ ಕೋರಲಾಗಿದೆಎರಡು ಪ್ರಕರಣಗಳ ತನಿಖೆಗೆ ಅವಕಾಶ ಸಂವಿಧಾನದ 21ನೇ ಅಡಿಯಲ್ಲಿ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಎರಡು ಬೇರೆ ಬೇರೆ ತನಿಖಾ ಸಂಸ್ಥೆಗಳು ಒಂದೇ ಪ್ರಕರಣವನ್ನು ಬೇರೆ ಬೇರೆ ರಾಜ್ಯಗಳಲ್ಲಿ ತನಿಖೆ ನಡೆಸುವುದು ಅರ್ಜಿದಾರನ ಹಕ್ಕು ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಮಾರ್ಚ್ 18 ರಂದು ರೆಹಮತುಲ್ಲಾ ಮಧುರೈನಲ್ಲಿ ಮಾಡಿದ ಭಾಷಣದ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಾರ್ಚ್ 19 ರಂದು ತಮಿಳುನಾಡು ಪೊಲೀಸರು ನ್ಯಾಯಮೂರ್ತಿಗಳಿಗೆ ಬೆದರಿಕೆ ಆರೋಪದಡಿ ರೆಹಮತುಲ್ಲಾನನ್ನು ಬಂಧಿಸಲಾಗಿತ್ತು. ಈ ಪ್ರಕರಣದ ಬಳಿಕ ಬೆಂಗಳೂರಿನಲ್ಲಿ ಸೆಕ್ಷನ್ 506(1) (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ), 505(1)(ಸಿ), 505(1)(ಬಿ), 505(2), 153A, 109 ಅಡಿಯಲ್ಲಿ ರೆಹಮತುಲ್ಲಾ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss