ಹೊಸದಿಗಂತ ಡಿಜಿಟಲ್ ಡೆಸ್ಕ್:
ಫ್ರಾಂಕ್ಫರ್ಟ್ನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವೊಂದಕ್ಕೆ ಹೈಜಾಕ್ ಬೆದರಿಕೆ ಬಂದಿದ್ದು, ಎಚ್ಚರಿಕೆಯಿಂದ ಜೈಪುರಕ್ಕೆ ಮಾರ್ಗ ಬದಲಾಯಿಸಿ ಏರ್ಪೋರ್ಟ್ನಲ್ಲಿ ಲ್ಯಾಂಡಿಂಗ್ ಮಾಡಲಾಗಿದೆ.
ಆರಂಭಿಕ ವರದಿಗಳಲ್ಲಿ ಬಾಂಬ್ ಬೆದರಿಕೆ ಎಂದು ಹೇಳಲಾಗಿತ್ತಾದರೂ, ಇದು ವಿಮಾನ ಅಪಹರಣದ ವದಂತಿಗೆ ಸಂಬಂಧಿಸಿದ ಎಚ್ಚರಿಕೆಯಾಗಿತ್ತು ಎಂದು ವಿಮಾನ ನಿಲ್ದಾಣದ ಮೂಲವೊಂದು ಮಾಧ್ಯಮಗಳಿಗೆ ತಿಳಿಸಿದೆ.
AI 2030 ವಿಮಾನವು ಜೈಪುರದಲ್ಲಿ ಇಳಿದ ಬಳಿಕ ಅದನ್ನು ಪ್ರತ್ಯೇಕ ಪ್ರದೇಶದಲ್ಲಿ ನಿಲ್ಲಿಸಲಾಯಿತು. ಕೇಂದ್ರ ಕೈಗಾರಿಕಾ ಭದ್ರತಾ ಪಡೆ , ಸ್ಥಳೀಯ ಪೊಲೀಸರು ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಸಿಬ್ಬಂದಿ ವಿಮಾನ ಮತ್ತು ಪ್ರಯಾಣಿಕರ ಲಗೇಜ್ಗಳನ್ನು ಪರಿಶೀಲಿಸಲು ಆರಂಭಿಸಿದರು.
ಇದು ವಿಮಾನ ಅಪಹರಣದ ವದಂತಿಯೇ ಹೊರತು ಬಾಂಬ್ ಬೆದರಿಕೆಯಲ್ಲ. ಈ ಬಗ್ಗೆ ಅಧಿಕೃತವಾಗಿ ಪ್ರತಿಕ್ರಿಯಿಸಲು ಇದು ತುಂಬಾ ಆರಂಭಿಕ ಹಂತವಾಗಿದೆ. ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಸದ್ಯ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



