ಹೊಸದಿಗಂತ ಆನ್ಲೈನ್ ಡೆಸ್ಕ್:
ದಿನೇ ದಿನೆ ತೈಲೋತ್ಪನ್ನಗಳ ದರ ಏರಿಕೆಯಾಗುತ್ತಿದ್ದು, ಮೂರು ದಿನಗಳ ಬಳಿಕ ಮತ್ತೆ ದರ ಗಗನಕ್ಕೇರಿದೆ.
ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ24 ಪೈಸೆ ಮತ್ತು ಡಿಸೇಲ್ ದರದಲ್ಲಿ 15 ಪೈಸೆ ಏರಿಕೆಯಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ದರ 91.17ರೂ.ಗೆ ಏರಿಕೆಯಾಗಿದ್ದು, ಡಿಸೇಲ್ ದರ 81.47 ರೂ.ಗೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 94.22 ರೂಗೆ ಏರಿಕೆಯಾಗಿದೆ. ಪ್ರತೀ ಲೀಟರ್ ಪೆಟ್ರೋಲ್ ದರ 86.37 ರೂ ಗೆ ಏರಿಕೆಯಾಗಿದೆ. ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 24 ಪೈಸೆ ಏರಿಕೆಯಾಗಿ ಪ್ರತೀ ಲೀಟರ್ ಪೆಟ್ರೋಲ್ ದರ 97.57 ಏರಿಕೆಯಾಗಿದ್ದು, ಡೀಸೆಲ್ ದರ 15 ಪೈಸೆ ಏರಿಕೆಯಾಗಿ ಪ್ರತೀ ಲೀಟರ್ ಡೀಸೆಲ್ ದರ 88.60 ರೂ. ಗೆ ಏರಿಕೆಯಾಗಿದೆ.