ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ: ವಾಹನ ಸಂಚಾರಕ್ಕೆ ಇಲ್ಲಿದೆ ಬದಲಿ ಮಾರ್ಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಆಗುಂಬೆ ಘಾಟಿಯ11ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ
ಕುಸಿತವಾಗಿರುವ ಮಣ್ಣು ಮತ್ತು ಮರಮುಟ್ಟುಗಳನ್ನು ತೆರವುಗೊಳಿಸುವ ಕಾರ್ಯ ಚುರುಕುಗೊಂಡಿದೆ. ಆದರೂ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಜುಲೈ 12ರ ಮುಂಜಾನೆ 8 ಗಂಟೆಯವರೆಗೂ ನಿರ್ಬಂಧಿಸಲಾಗಿದೆ.
ನಂತರ ಜುಲೈ 30ರ ವರೆಗೆ ಈ ಮಾರ್ಗದಲ್ಲಿ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುತ್ತದೆ.
ಬದಲಿ ಮಾರ್ಗ:
ಶಿವಮೊಗ್ಗದಿಂದ ಉಡುಪಿ-ಮಂಗಳೂರಿಗೆ ಹೋಗುವ ಪ್ರಯಾಣಿಕರು ತೀರ್ಥಹಳ್ಳಿ-ಕೊಪ್ಪ-ಶೃಂಗೇರಿ- ಕಾರ್ಕಳ-ಮಂಗಳೂರು ತಲುಪಬಹುದು ಹಾಗೂ ತೀರ್ಥಹಳ್ಳಿ-ಮಾಸ್ತಿಕಟ್ಟೆ-ಕುಂದಾಪುರ ಮಾರ್ಗವನ್ನು ಬಳಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!